ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆ 2ನೇ ಸ್ಥಾನ / ತಲೆತಗ್ಗಿಸಬೇಕಾದ ಸಂಗತಿ !

Shimoga district has to be ranked second in the case of child abuse– Manjunath Naik, Judge

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ  ಶಿವಮೊಗ್ಗ ಜಿಲ್ಲೆ 2ನೇ ಸ್ಥಾನ / ತಲೆತಗ್ಗಿಸಬೇಕಾದ ಸಂಗತಿ !

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS

ಶಿವಮೊಗ್ಗ / ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದೆರೆ ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಇದು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯ್ಕರವರು ಖೇದ ವ್ಯಕ್ತಪಡಿಸಿದರು.

ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಿಮ್ಸ್ ಸಭಾಂಗಣದಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳಿಗೆ ಪೋಕ್ಸೋ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸಕ್ತ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ವಿಷಾಧಕರ.  ಇಂದು ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬ ನಾಗರೀಕನೂ ಸಾಮಾಜಿಕ ಜವಾಬ್ಧಾರಿಗಳನ್ನು ಹೊಂದಬೇಕು.  ಪೋಕ್ಸೋ ಪ್ರಕರಣಗಳಲ್ಲಿ ಅಪರಾಧಿಗೆ ಶಿಕ್ಷೆಯಾಗಬೇಕಾದರೆ ಮತ್ತು ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕಾದರೆ ವೈದ್ಯಾಧಿಕಾರಿಗಳು ನೀಡುವ ವರದಿ ತುಂಬಾ ಮಹತ್ವದ್ದಾಗಿದೆ.  ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ತಮ್ಮ ಹೇಳಿಕೆ ಮಹತ್ವ ಪೂರ್ಣವಾಗಿದೆ.  ತಮ್ಮ ಪ್ರಾಮಾಣಿಕ ಕಳಕಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ನ್ಯಾಯಾಧೀಶ ಮೋಹನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಚಂದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಸಿದ್ಧನಗೌಡ ಪಾಟೀಲ್, ವೈದ್ಯಾಧಿಕಾರಿ ಡಾ|| ನಾಗರಾಜ್ ನಾಯ್ಕ್, ಸಿಮ್ಸ್ ನಿರ್ದೇಶಕ ವಿರುಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಶ್ರೀಧರ್ ಹಾಗೂ ಶ್ರೀಮತಿ ಪ್ರಿಯಾಂಕ ಉಪಸ್ಥಿತರಿದ್ದರು.