ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಮೇರಾ ಯುವ ಭಾರತ್ ಶಿವಮೊಗ್ಗ ಹಾಗೂ ಎನ್‌ಎಸ್‌ಎಸ್ ಘಟಕಗಳು ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ಮೇಳವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಅಕ್ಟೋಬರ್ 16 ರಂದು, ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್ (PESITM) ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. Science Fair
- ಈ ವಿಜ್ಞಾನ ಮೇಳದಲ್ಲಿ ಭಾಗವಹಿಸಲಿಚ್ಛಿಸುವವರು ಕಡ್ಡಾಯವಾಗಿ ಶಿವಮೊಗ್ಗ ಜಿಲ್ಲೆಗೆ ಸೇರಿದವರಾಗಿರಬೇಕು.
- ಸ್ಪರ್ಧೆಯಲ್ಲಿ ಪ್ರತಿ ತಂಡಕ್ಕೆ ಕೇವಲ 5 ಜನ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
- ಅಲ್ಲದೆ, ಸ್ಪರ್ಧಾಳುಗಳ ವಯೋಮಿತಿ 15 ರಿಂದ 29 ವರ್ಷದೊಳಗಿರಬೇಕು.
- ಸ್ಪರ್ಧೆಯಲ್ಲಿ ಪ್ರದರ್ಶಿಸಲು ಬೇಕಾದ ಎಲ್ಲ ಅಗತ್ಯ ಸಾಮಗ್ರಿಗಳನ್ನು ಸ್ಪರ್ಧಿಗಳೇ ತರಬೇಕಾಗುತ್ತದೆ.
- ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವ ವಿಜೇತ ತಂಡಗಳಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಮಹತ್ವದ ಅವಕಾಶ ಲಭ್ಯವಾಗಲಿದೆ.
ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನಿಗದಿಪಡಿಸಲಾಗಿದೆ. ಮೊದಲ ಬಹುಮಾನವಾಗಿ ₹5,000, ಎರಡನೇ ಬಹುಮಾನವಾಗಿ ₹3,000 ಹಾಗೂ ಮೂರನೇ ಬಹುಮಾನವಾಗಿ ₹2,000 ನೀಡಲಾಗುತ್ತದೆ. ತೀರ್ಪುಗಾರರ ಮೌಲ್ಯಮಾಪನವು ಪ್ರದರ್ಶನದಲ್ಲಿನ ನಾವಿನ್ಯತೆ (Innovation), ಪ್ರಸ್ತುತಪಡಿಸುವ ಗುಣಮಟ್ಟ (Quality of Presentation) ಮತ್ತು ಪರಿಣಾಮಕಾರಿಯಾದ ಪ್ರಸ್ತುತಪಡಿಸುವ ಕೌಶಲ್ಯದ (Effective Demonstration) ಆಧಾರದ ಮೇಲೆ ಇರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ವಿವರಗಳಿಗಾಗಿ ನೀವು ದೂರವಾಣಿ ಸಂಖ್ಯೆಗಳು: 9900280416 ಅಥವಾ 9845863549 ಗೆ ಸಂಪರ್ಕಿಸಬಹುದು.

Shimoga District Level Science Fair 2025: Innovation, Competition, and Cash Prizes
Shimoga Science Fair date, PESITM Science Exhibition, Youth Festival Science Competitio,How to participate in Shimoga Science Fair, Registration for Science Fair Shivamogga,ಶಿ ವಮೊಗ್ಗ ವಿಜ್ಞಾನ ಮೇಳ, ಜಿಲ್ಲಾ ಮಟ್ಟದ ವಿಜ್ಞಾನ ಸ್ಪರ್ಧೆ, ಪಿಇಎಸ್‌ಐಟಿಎಂ, ಯುವಜನೋತ್ಸವ ಶಿವಮೊಗ್ಗ,
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!