SHIVAMOGGA NEWS TODAY

ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ: 65,000 ರೂ. ಮೌಲ್ಯದ ಮಾದಕ ವಸ್ತು ವಶ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga Drug Bust ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬೈಕ್​ನಲ್ಲಿ ಹೋಗ್ತಿದ್ದವರ ಮೇಲೆ ಜೇನುನೊಣಗಳ ದಾಳಿ, 10 ಮಂದಿಗೆ ಪೆಟ್ಟು! ಒಮಿನಿ-ಟಿಪ್ಪರ್​ ಡಿಕ್ಕಿ , ಆರು ಮಂದಿ ಗಂಭೀರ

ಜೂನ್ 24, 2026 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಲಕ್ ಶಾದಿ ಮಹಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಅವರು ತಮ್ಮ ಸಿಬ್ಬಂದಿಯೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.

ಈದಾಳಿಯ ಸಂದರ್ಭದಲ್ಲಿ ಅಕ್ಮಲ್ ಖಾನ್ (23 ವರ್ಷ) ಎಂಬ ಆರೋಪಿಯನ್ನು ಪೊಲೀಸರು ವಶಪಡಿಸಿಕೊಳ್ಳುವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಅಂದಾಜು 65,000/- ರೂ. ಮೌಲ್ಯದ, ಒಟ್ಟು 01 ಕೆಜಿ 261 ಗ್ರಾಂ ತೂಕದ ಮಾದಕ ವಸ್ತುವಾದ ಗಾಂಜಾವನ್ನು ಪೊಲೀಸರು ಕಾನೂನುಬದ್ಧವಾಗಿ ಅಮಾನತುಪಡಿಸಿಕೊಂಡಿದ್ದಾರೆ.

Shimoga Drug Bust Ganja Worth 65K Seized

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.