SHIVAMOGGA | MALENADUTODAY NEWS |
Sep 6, 2024
Shimoga Fast news
ಕಾಲುವೆಗೆ ಬಿದ್ದ ಬೈಕ್ ಸವಾರ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೀರ್ಥಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬೈಕ್ ಬ್ಯಾಲೆನ್ಸ್ ತಪ್ಪಿದ ಪರಿಣಾಮ ಬೈಕ್ ಸವಾರನೊಬ್ಬ ಕಾಲುವೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಈ ಸಂಬಂಧ ಪೊಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯ ಪಡೆದು ಗಾಯಗೊಂಡಿದ್ದ ವ್ಯಕ್ತಿಯನ್ನ ಮೇಲಕ್ಕೆ ಎತ್ತಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಂತು ಕಟ್ಟಲು ಕಿರಿಕ್ (bhadravati news)
ಇತ್ತ ಭದ್ರಾವತಿಯಲ್ಲಿ ಸಾಲದ ಕಂತು ಕಟ್ಟುವ ವಿಚಾರಕ್ಕೆ ಫೈನಾನ್ಸ್ ನವರ ಜೊತೆಗೆ ಸಾಲಗಾರ ಕಿರಿಕ್ ಮಾಡಿಕೊಂಡು ವಿಚಾರದ ದೊಡ್ಡದಾಗಿತ್ತು. ಮಾತಿಗೆ ಮಾತು ಬೆಳೆದು ಆರಂಭವಾದ ಜಗಳ ಓಲ್ಡ್ ಟೌನ್ ಪೊಲೀಸ್ ಠಾಣೆಯವರಿಗೆ ತಲುಪಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ 112 ಪೊಲೀಸರು ಗಲಾಟೆಯನ್ನ ನಿಲ್ಲಿಸಿ ಎರಡುಕಡೆಯವರಿಗೂ ವಾರ್ನಿಂಗ್ ಕೊಟ್ಟಿದ್ದಾರೆ. ಅಲ್ಲದೆ ಮಾತುಕತೆಯಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಬಸ್ ಲಾರಿ ಡಿಕ್ಕಿ
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯ (tunganagara police station ) ವ್ಯಾಪ್ತಿಯಲ್ಲಿ ಲಾರಿ ಹಾಗೂ ಬಸ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ನ ಒಂದು ಭಾಗ ನುಜ್ಜುಗುಜ್ಜಾಗಿದೆ. ಇನ್ನೂ ಘಟನೆಯಲ್ಲಿ ಬಸ್ಸಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನನ್ನ ಸ್ಥಳಕ್ಕೆ ಬಂದ ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆ ಬಳಿಕ ವಾಹನಗಳನ್ನ ರಸ್ತೆಯಿಂದ ತೆರವುಗೊಳಿಸಿ ತುಂಗಾನಗರ ಪೊಲೀಸ್ ಠಾಣೆಗೆ ವಿಚಾರವನ್ನು ರವಾನಿಸಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ