SHIVAMOGGA | MALENADUTODAY NEWS | Sep 5, 2024
Shimoga Fast news | ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿಯು ಹೀಗಿದೆ.
ಮನೆಯಲ್ಲಿ ಮಹಿಳೆ ಶವ ಪತ್ತೆ
ಶಿವಮೊಗ್ಗ ನಗರದ (shimoga city)ಗೋಪಾಳ ಗೌಡ ಬಡಾವಣೆಯ ಮನಯೊಂದರಲ್ಲಿ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯನ್ನ 48 ವರ್ಷ ಸುಧಾ ಎಂದು ಗುರುತಿಸಲಾಗಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ (tunga nagara police statuon ) ಈ ಸಂಬಂಧ ಅನುಮಾನಸ್ಪದ ಸಾವಿನ ಪ್ರಕರಣ ದಾಖಲಾಗಿದೆ.
ಕಾಚಿನಕಟ್ಟೆಯಲ್ಲಿ ವ್ಯಕ್ತಿ ಆತ್ಮಹತ್ಯೆ
ಇತ್ತ ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನನ್ನ ಗೋವಿಂದರಾಜು ಎಂದು ಗುರುತಿಸಲಾಗಿದೆ. ಇವರಿಗೆ ಮದುವೆಯಾಗಿ 20 ವರುಷ ಕಳೆದರೂ ಮಕ್ಕಳಾಗಿಲ್ಲ ಎಂಬ ಚಿಂತೆ ಕಾಡುತ್ತಿತ್ತು ಎನ್ನಲಾಗಿದೆ. ಇವರ ಶವ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಲಾರಿ ಡಿಕ್ಕಿ ಬೈಕವ್ ಸವಾರರಿಗೆ ಗಾಯ
ಚಾಲಕನ ನಿಯಂತ್ರಣ ಕಳೆದುಕೊಂಡ ಟಿಪ್ಪರ್ ಲಾರಿ (lorry) ಯೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯವಾದ ಘಟನೆ, ಶಿವಮೊಗ್ಗ ನಗರದ ಹೊರವಲಯ ಮೋಜಪ್ಪನ ಹೊಸೂರು ಕ್ರಾಸ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ನುಜ್ಜುಗುಜ್ಜಾಗಿದೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ