ಹೆಲ್ತ್ ಚೆಕಪ್​ ಮಾಡಿಸ್ಕೋಬೇಕು ಅಂತಿದ್ದೀರಾ! ಶಿವಮೊಗ್ಗದಲ್ಲಿ ನಡೆಯುತ್ತಿದೆ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರ! ವಿವರ ಇಲ್ಲಿದೆ

SHIVAMOGGA  |  Dec 27, 2023  |   ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರ

ಶಿವಮೊಗ್ಗ ಜಿಲ್ಲಾ ಹಿರಿಯ ನಾಗರೀಕರ ಮನರಂಜನಾ ಹಾಗೂ ಕ್ಷೇಮಾಭಿವೃದ್ಧಿ ಸಂಘವು ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇವರ ಸಂಯುಕ್ತಾಶ್ರಯದಲ್ಲಿ 2024ರ ಜನವರಿ ತಿಂಗಳಿನಲ್ಲಿ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಡಿ. 28 ರಂದು ಮಧ್ಯಾಹ್ನ 12.00ಕ್ಕೆ ನಗರದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಆವರಣದಲ್ಲಿ  ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.

READ :ಯುವನಿಧಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲಾ ಅರ್ಹರು! ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದ್ದೇನು?

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ|| ಪ್ರಭುಲಿಂಗ ವೈ. ಕೊಣ್ಣೂರು ನೆರವೇರಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಜಯನಗರ ಪೊಲೀಸ್ ಇನ್ಸ್‍ಪೆಕ್ಟರ್ ಹೆಚ್.ಎಂ. ಸಿದ್ದೇಗೌಡರು ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ ಮೊ.ಸಂ.: 9448814467/9980219956/ 9946728062 ಗಳನ್ನು ದಿ: 01/01/2024 ರಿಂದ 15/01/2024ರವರೆಗೆ ಮ. 1.00 ರೊಳಗಾಗಿ ಸಂಪರ್ಕಿಸುವುದು. 

Leave a Comment