ನಾಳೆ ಶಿವಮೊಗ್ಗ ಉಸ್ತುವಾರಿ ಸಚಿವರ ಭೇಟಿ! ಯಾವೆಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಮಧು ಬಂಗಾರಪ್ಪ? ಇಲ್ಲಿದೆ ವಿವರ

Shimoga in-charge minister Madhu Bangarappa will be on a tour of Shivamogga tomorrow. ನಾಳೆ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸದಲ್ಲಿ ಇರಲಿದ್ದಾರೆ.

ನಾಳೆ ಶಿವಮೊಗ್ಗ ಉಸ್ತುವಾರಿ ಸಚಿವರ ಭೇಟಿ! ಯಾವೆಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಮಧು ಬಂಗಾರಪ್ಪ? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಆಗಸ್ಟ್ 29 ಮತ್ತು 30 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.  

ಆ.29 ರಂದು ಸಂಜೆ 07.00 ಗಂಟೆಗೆ ಉಡುಪಿಯಿಂದ ಹೊರಟು ರಾ 10.00 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ  ವಾಸ್ತವ್ಯ ಮಾಡುವರು.

ಆ.30 ರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11.00ಕ್ಕೆ ಜಿಲ್ಲಾಡಳಿತ ಆಯೋಜಿಸಿರುವ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

ಮಧ್ಯಾಹ್ನ 02.00ಕ್ಕೆ ಜಿಲ್ಲಾಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ಸಂಜೆ 5.00 ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


ಇನ್ನಷ್ಟು ಸುದ್ದಿಗಳು