ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಶಿವಮೊಗ್ಗದಲ್ಲಿ ನೇರ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮೇಳ ಆರಂಭವಾಗಲಿದ್ದು, ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಶಿವಮೊಗ್ಗದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ಪ್ರಕ್ರಿಯೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 18ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ನೇರವಾಗಿ ಸಂಪರ್ಕಿಸಬಹುದು. ಅಲ್ಲದೆ 9380663606 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
