ಶಿವಮೊಗ್ಗ : ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಸಮಿರಿಗೆ ರೇಖಾ ರಂಗನಾಥ್, ಸುನಿಲ್, ದೇವಂದ್ರಪ್ಪ!

ಹಂಚಿಕೊಳ್ಳಿ
WhatsApp Facebook X Telegram
Shimoga Kote Anjaneya Temple New Committee
Shimoga Kote Anjaneya Temple New Committee

Shimoga ಶಿವಮೊಗ್ಗ: ನಗರದ ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಒಟ್ಟು 9 ಸದಸ್ಯರನ್ನು ಒಳಗೊಂಡ ಹೊಸ ಸಮಿತಿಯನ್ನು ರಚಿಸಲಾಗಿದೆ.

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿ! ಶಿವಮೊಗ್ಗದಲ್ಲಿ ಗ್ಯಾರಂಟಿ ಮೀಟಿಂಗ್​ನಲ್ಲಿ ಏನೆಲ್ಲಾ ನಡೆಯಿತು ಓದಿ 

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಸದಸ್ಯರನ್ನಾಗಿ ಮಹಾನಗರ ಪಾಲಿಕೆಯ ಹೊಸಮನೆ ಬಡಾವಣೆಯ ಮಾಜಿ ಸದಸ್ಯರು ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾಗಿರುವ ರೇಖಾ ರಂಗನಾಥ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಇವರನ್ನು ನೇಮಕ ಮಾಡಿದ್ದಕ್ಕಾಗಿ, ರೇಖಾ ರಂಗನಾಥ್ ಅವರು ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದೇ ಸಮಿತಿಗೆ ಗಾಂಧಿಬಜಾರ್ ನಿವಾಸಿಯಾದ ಎ.ಎಚ್.ಸುನಿಲ್ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದಾರೆ. ಸುನಿಲ್ ಅವರು ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ರಾಮಣ್ಣ ಶ್ರೇಷ್ಠಿ ಪಾರ್ಕ್ನ ಶ್ರೀ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇವರೊಂದಿಗೆ ದೇವೇಂದ್ರಪ್ಪ ಸೇರಿದಂತೆ ಇತರ ಗಣ್ಯರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

Shimoga Kote Anjaneya Temple New Committee

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor