ಶಿವಮೊಗ್ಗ ಲೋಕಸಭಾ ಕ್ಷೇತ್ರ | ಮೂರು ನಾಮಪತ್ರ ವಾಪಸ್‌ | ಎಷ್ಟು ಮಂದಿ ಕಣದಲ್ಲಿದ್ದಾರೆ?

Shimoga Lok Sabha Constituency | Three nominations returned How many are there?

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಮೂರು ನಾಮಪತ್ರ ವಾಪಸ್‌ | ಎಷ್ಟು ಮಂದಿ ಕಣದಲ್ಲಿದ್ದಾರೆ?
Shimoga Lok Sabha Constituency

SHIVAMOGGA | MALENADUTODAY NEWS | Apr 22, 2024  

 

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಉಮೇದುವಾರಿಕೆ ಹಿಂಪಡೆಯಲು ಇವತ್ತು ಕಡೆಯ ದಿನಾಂಕವಾಗಿತ್ತು. ಇದೀಗ ಅದರ ಗಡುವು ಮುಗಿದಿದ್ದು ಶಿವಮೊಗ್ಗ ಲೋಕಸಭಾ ಚುನಾವಣಾ ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ

 

ಚುನಾವಣಾ ಅಧಿಕಾರಿಗಳು ವಾರ್ತಾ ಇಲಾಖೆಯ ಮೂಲಕ ನೀಡಿರುವ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ಪಕ್ಷದಿಂದ  ಗೀತಾ ಶಿವರಾಜ್‍ಕುಮಾರ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದಿಂದ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್ ಕಣದಲ್ಲಿದ್ದಾರೆ. 

 

ಇನ್ನೂ ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್,  ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.