ಶಿವಮೊಗ್ಗ ಲೋಕಸಭಾ ಕ್ಷೇತ್ರ | ಯಾರ ನಾಮಪತ್ರ ತಿರಸ್ಕೃತ| ಯಾರದ್ದು ಸಿಂಧು | ಇಲ್ಲಿದೆ ವಿವರ

Shimoga Lok Sabha Constituency | Whose nomination was rejected Whose Sindhu | Here is the detail

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಯಾರ ನಾಮಪತ್ರ ತಿರಸ್ಕೃತ| ಯಾರದ್ದು ಸಿಂಧು | ಇಲ್ಲಿದೆ ವಿವರ
Shimoga Lok Sabha Constituency

SHIVAMOGGA | MALENADUTODAY NEWS |  Apr 20, 2024  

ಶಿವಮೊಗ್ಗ ಲೋಕಸಭಾ ಚುನಾವಣೆ ಕ್ಷೇತ್ರಕ್ಕೆ  (Shimoga Lok Sabha Constituency )ಸಂಬಂಧಿಸಿದಂತೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಮುಗಿದಿದ್ದು ಇದೀಗ ನಾಮಪತ್ರ ವಾಪಸ್‌ ಪಡೆಯಲು ಅವಕಾಶ ನೀಡಲಾಗಿದೆ. 

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್‌ 20 ರಂದು ಅಂದರೆ ಇವತ್ತು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. 

ಏಪ್ರಿಲ್‌ 12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕೃತಗೊಂಡಿದೆ. ಹಾಗೂ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.

ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ