ಮಹಿಳೆಯ ಬಳಿ 40000 ರೂಪಾಯಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ! ಆಮೇಲೆ ನಡೆದಿದ್ದಿಷ್ಟು!

Shimoga Lokayukta police arrest officer while accepting Rs 40,000 bribe from woman

ಮಹಿಳೆಯ  ಬಳಿ 40000 ರೂಪಾಯಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ! ಆಮೇಲೆ ನಡೆದಿದ್ದಿಷ್ಟು!
Shimoga Lokayukta police arrest

Shivamogga Mar 7, 2024   ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು  ಬಂಧಿಸಿದ್ದಾರೆ. ಈ ಸಂಬಂಧ  

ಕರ್ನಾಟಕ ಲೋಕಾಯಕ್ತ ಕ.ಲೋ. ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿದ್ರು. ಈ ಸಂಬಂಧ  ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ್ದರು. . ಈ ಸಂದರ್ಭ ಕಂದಾಯ ನಿರೀಕ್ಷಕರು 40000/- ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರಂತೆ. 

ಹೀಗಾಗಿ ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.  ಈ ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್‍ರವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ. 

ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರ ನೇತೃತ್ವದಲ್ಲಿ ನಡೆಸಲಾಗಿದ್ದು, ಶಿವಮೊಗ್ಗ ಲೋಕಾಯುಕ್ತ ಕಛೇರಿಯ, ಪೊಲೀಸ್ ನಿರೀಕ್ಷಕರಾದ ಹೆಚ್.ಎಸ್. ಸುರೇಶ್, ಪೊಲೀಸ್ ಸಿಬ್ಬಂದಿಗಳಾದ ಮಹಂತೇಶ, ಸಿ.ಹೆಚ್.ಸಿ., ಸುರೇಂದ್ರ, ಸಿ.ಹೆಚ್.ಸಿ., ಯೋಗೀಶ್, ಸಿ.ಹೆಚ್.ಸಿ., ಬಿ.ಟಿ. ಚನ್ನೇಶ, ಸಿಪಿಸಿ, ಪ್ರಶಾಂತ್‍ಕುಮಾರ್, ಸಿಪಿಸಿ, ಅರುಣ್‍ಕುಮಾರ್, ಸಿಪಿಸಿ, ದೇವರಾಜ, ಸಿ.ಪಿ.ಸಿ., ರಘುನಾಯ್ಕ, ಸಿ.ಪಿ.ಸಿ., ಕೆ.ಸಿ. ಜಯಂತ, ಎಪಿಸಿ, ವಿ. ಗೋಪಿ, ಎಪಿಸಿ ಮತ್ತು ಪ್ರದೀಪ್ ಕುಮಾರ್, ಎಪಿಸಿ, ಬಿ.ಕೆ. ಗಂಗಾಧರ, ಎಪಿಸಿ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.