KARNATAKA NEWS/ ONLINE / Malenadu today/ Oct 13, 2023 SHIVAMOGGA NEWS
ಶಿವಮೊಗ್ಗದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಟ್ರ್ಯಾಪ್ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.
ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು.
ದೂರಿನನ್ವಯ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.ಸ್ಮಶಾನದ ಕಾಮಗಾರಿ ಪರಿಶೀಲಿಸಿ ರಿಪೋರ್ಟ್ ಕೊಡುವ ಸಂಬಂಧ 15 ಸಾವಿರ ರೂಪಾಯಿ ಲಂಚ ಪಡೆಯುವಾಗಲೇ ಗೋಪಿನಾಥ್ ನವರನ್ನು ಟ್ರ್ಯಾಪ್ ಮಾಡಿದ್ದಾರೆ. ಪ್ರಕರಣ ಸಂಬಂಧ ಗೋಪಿನಾಥ್ ರನ್ನ ವಶಕ್ಕೆ ಪಡೆಯಲಾಗಿದೆ.
ಇನ್ನಷ್ಟು ಸುದ್ದಿಗಳು
