ಶಿವಮೊಗ್ಗದಲ್ಲಿ ಈ ದಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ ಶಿವಮೊಗ್ಗ ; ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4 ರಂದು ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಶಿವಮೊಗ್ಗ ಮಹಾನಗರಪಾಲಿಕೆ ತಿಳುವಳಿಕೆ ಪತ್ರ ಹೊರಡಿಸಿದೆ.

ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರ ದಿನವನ್ನು ಮಾಂಸರಹಿತ ದಿನವೆಂದು ಘೋಷಿಸಿದ್ದು  ಅಂದು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಉದ್ದಿಮೆದಾರರು ಅಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟವನ್ನು ಸ್ಥಗಿತಗೊಳಿಸಬೇಕು. ಈ ನಿಯಮವನ್ನು ಉಲ್ಲಂಘಿಸುವವರ  ವಿರುದ್ಧ ಕಾನೂನು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor