ಶಿವಮೊಗ್ಗದಲ್ಲಿ ಮತ್ತೊಂದು ಎಲೆಕ್ಷನ್‌ | ಶಿವಮೊಗ್ಗ, ಮೈಸೂರು, ತುಮಕೂರು ಪಾಲಿಕೆ ಚುನಾವಣೆಗೆ ದಿನಾಂಕ ಫಿಕ್ಸ್?

Another election in Shimoga | Shimoga, Mysuru, Tumakuru Municipal Corporation elections 2024: Date fixed?

ಶಿವಮೊಗ್ಗದಲ್ಲಿ ಮತ್ತೊಂದು ಎಲೆಕ್ಷನ್‌ | ಶಿವಮೊಗ್ಗ, ಮೈಸೂರು, ತುಮಕೂರು ಪಾಲಿಕೆ ಚುನಾವಣೆಗೆ ದಿನಾಂಕ ಫಿಕ್ಸ್?
Shimoga, Mysuru, Tumakuru Municipal Corporation elections 2024 , ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ

SHIVAMOGGA | MALENADUTODAY NEWS | Aug 9, 2024

ಶಿವಮೊಗ್ಗವೂ ಸೇರಿದಂತೆ ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆ ಚುನಾವಣೆಗೆ ಮುಂದಿನವಾರ ಮುಹೂರ್ತ ನಿಗದಿಯಾಗಲಿದೆ. ಈ ಬಗ್ಗೆ  ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಸ್ಪಷ್ಟಪಡಿಸಿದ್ದಾರೆ. 

ಮೀಸಲಾತಿ ಬೆನ್ನಲ್ಲೆ ಶಿವಮೊಗ್ಗದಲ್ಲಿ ಎಲೆಕ್ಷನ್

ಎರಡು ದಿನಗಳ ಹಿಂದಷ್ಟೆ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗದಲ್ಲಿ ಮತ್ತೊಂದು ಚುನಾವಣೆಯ ಚಟುವಟಿಕೆ ಆರಂಭವಾಗಲಿದೆ. 

61 ನಗರಸಭೆ, 123 ಪುರಸಭೆ ಹಾಗೂ 117 ಪಂ. ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ ಪ್ರಕಟ | ಶಿವಮೊಗ್ಗ ಸೇರಿ ಪೂರ್ತಿ ವಿವರ ಇಲ್ಲಿದೆ

ಚುನಾವಣಾ ಆಯುಕ್ತ ಹೇಳಿದ್ದೇನು?

ನಿನ್ನೆ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯ ಚುನಾವಣಾ ಆಯುಕ್ತ  ಸುಪ್ರೀಂಕೋರ್ಟ್‌ ಆದೇಶದಂತೆ ಅವಧಿ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ಹಾಗೆ ಹೊರಡಿಸದೇ ಇದ್ದ ಪಕ್ಷದಲ್ಲಿ, ಹಿಂದಿನ ಚುನಾವಣೆಯಲ್ಲಿ ನಿಗದಿ ಮಾಡಲಾಗಿದ್ದ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ಅನ್ವಯವೇ ಚುನಾವಣೆ ನಡೆಸಬಹುದು. 

ಮುಂದಿನ ವಾರ ದಿನಾಂಕ ಘೋಷಣೆ

ಈ ಹಿನ್ನೆಲೆಯಲ್ಲಿ ಅವಧಿ ಮುಗಿದ ತುಮಕೂರು, ಶಿವಮೊಗ್ಗ ಹಾಗೂ ಮೈಸೂರು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಸಿದ್ಧವಾಗಿದೆ ಎಂದಿದ್ದಾರೆ. ಅಲ್ಲದೆ ಈ ಸಂಬಂಧ ಮುಂದಿನವಾರ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ