SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 22, 2024 Shivamogga Fast news
ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಸಾವು
ಶಿವಮೊಗ್ಗ ಜಿಲ್ಲೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಹತ್ತಿರ ರಸ್ತೆ ಬದಿ 50-55 ವರ್ಷದ ವ್ಯಕ್ತಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಗೋವಿಂದಪುರದ ಹಾಯ್‌ಹೊಳೆ ರಸ್ತೆ ಬದಿಯಲ್ಲಿ ಆ.14ರಂದು ಅಸ್ವಸ್ಥಗೊಂಡಿದ್ದ 65 ವರ್ಷದ ವೃದ್ಧನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು ತುಂಗಾನಗರ ಠಾಣೆಯಲ್ಲಿ ಪ್ರಕರಣ ಪ್ರತ್ಯೇಕ ದಾಖಲಾಗಿವೆ.́́
ತೀರ್ಥಹಳ್ಳಿಯಲ್ಲಿ ಯುವಕ ಆತ್ಮಹತ್ಯೆ
ತೀರ್ಥಹಳ್ಳಿ ತಾಲ್ಲೂಕಿನ ಆರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗ್ರಾಮದ ಸುನೀಲ್ (35) ಆತ್ಮಹತ್ಯೆ ಮಾಡಿಕೊಂಡವರು. ವಿಷ ಸೇವಿಸಿದ್ದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೊಸನಗರ ತಾಲ್ಲೂಕಿನ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇವರ ವಿರುದ್ಧ ಹಣ ದುರ್ಬಳಕೆ ಆರೋಪ ಇತ್ತು. ಆನಂತರ ಆನ್‌ಲೈನ್‌ನಲ್ಲಿ ಹಣ ತೊಡಗಿಸಿ ಕಾಸು ಕಳೆದುಕೊಂಡಿದ್ದರು ಎನ್ನಲಾಗಿದೆ.
ಮಾತನಾಡಬೇಕು ಎಂದು ಕರೆದು ಹಲ್ಲೆ
ಮಾತನಾಡಬೇಕು ಎಂದು ಕರೆಸಿಕೊಂಡು ಗುಂಪೊಂದು ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂ ಓಲ್ಡ್ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವಕ ಗಾಯಗೊಂಡಿದ್ದು, ಪ್ರಕರಣದಲ್ಲಿ ಮೂವರ ವಿರುದ್ಧ ಏಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ

