ಭತ್ತ ಮಾರೋರಿದ್ದೀರಾ!? ಇಲ್ಲಿದೆ ಸರ್ಕಾರದ ಮಹತ್ವದ ಮಾಹಿತಿ!

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ. 2389 ದರವನ್ನು ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ನೀಡಲಾಗಿದೆ. 

ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ಮೂಲಕ ನೀಡಿರುವ ಪ್ರಕಟಣೆಯ ಪ್ರಕಾರ, ಶಿವಮೊಗ್ಗ ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ  TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. 

ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಿದ್ದು, ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. 

ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಸಿದ್ದಾರೆ.

Shimoga Paddy MSP Fixed at 2389
Shimoga Paddy MSP Fixed at 2389

ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shimoga Paddy MSP Fixed at 2389 Procurement Starts Nov 1

Leave a Comment