Shimoga Police | ಶಿವಮೊಗ್ಗ | ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ಸಿಇಐಆರ್ (CEIR) ಪೋರ್ಟಲ್‌ನಲ್ಲಿ ಸಾರ್ವಜನಿಕರು ದಾಖಲಿಸುತ್ತಿರುವ ದೂರುಗಳನ್ನು ವಿಶೇಷವಾಗಿ ಪರಿಶೀಲಿಸುತ್ತಿರುವ ಪೊಲೀಸರು, ಕಳುವಾದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಅದರ ಅಸಲಿ ಮಾಲೀಕರಿಗೆ ಮರಳಿಸುತ್ತಿದ್ದಾರೆ.
ಇದಕ್ಕೆ ಪೂರಕ ಎಂಬಂತೆ ಕಳೆದ ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹತ್ತಕ್ಕೂ ಹೆಚ್ಚು ಮೊಬೈಲ್‌ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ನೀಡಲಾಗಿದೆ. ವಿಶೇಷವಾಗಿ ಶಿವಮೊಗ್ಗದ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆ, ತುಂಗಾನಗರ ಪೊಲೀಸ್ ಠಾಣೆ ಹಾಗೂ ಮಾಳೂರು ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಪತ್ತೆಯಾದ ಮೊಬೈಲ್‌ಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಹಿಂದಿರುಗಿಸಲಾಗಿದೆ.

ಎಸ್ಪಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಡೇಟ್
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಕೆಲಸಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಎಸ್ಪಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಜಿಲ್ಲೆಯಲ್ಲಿ ನಡೆಯುವ ಅಪರಾಧ ಪ್ರಕರಣಗಳು ಹಾಗೂ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ತ್ವರಿತವಾಗಿ ಅಪ್‌ಡೇಟ್ ನೀಡುತ್ತಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.






