ಸಕ್ರೆಬೈಲು ಸೇರಿದಂತೆ 40 ಕ್ಕೂ ಹೆಚ್ಚು ಪ್ರದೇಶದಲ್ಲಿ ಈ ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗದ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಅತ್ಯಗತ್ಯವಾದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ . ಈ ತಾಂತ್ರಿಕ ಕೆಲಸಗಳ ಕಾರಣದಿಂದಾಗಿ ಏಪ್ರಿಲ್ 21 ರ ಮಂಗಳವಾರ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:30 ರವರೆಗೆ ನಗರದ ಹೊರವಲಯದ ಪ್ರಮುಖ ಪ್ರದೇಶಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ: JNNCE ಹಾಸ್ಟೆಲ್ ರೂಮ್‌ಗೆ ನುಗ್ಗಿದ ಕಳ್ಳರು, ಕದ್ದಿದ್ದೇನು ಗೊತ್ತಾ? 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳೆಂದರೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು ಹಾಗೂ ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು .

ಈ ಸಮಯದಲ್ಲಿ ಸಾರ್ವಜನಿಕರು ಹಾಗೂ ರೈತರು ಕಾಮಗಾರಿಗೆ ಸಹಕರಿಸಬೇಕೆಂದು ಮೆಸ್ಕಾಂ ಮನವಿ ಮಾಡಿದೆ.

Shimoga Power Cut on April 21

Power Cut Shimoga Power Cut Power Outage in Shivamogga
Shimoga Power Cut