ರೈಲಿನಿಂದ ಬಿದ್ದ ಯುವಕ ಸಾವು | ಟ್ರೈನ್​ ಅಡಿ ಸಿಲುಕಿ ವ್ಯಕ್ತಿ ನಿಧನ

Shimoga Railway Police Station Announcement ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ

ರೈಲಿನಿಂದ ಬಿದ್ದ ಯುವಕ ಸಾವು | ಟ್ರೈನ್​ ಅಡಿ ಸಿಲುಕಿ ವ್ಯಕ್ತಿ ನಿಧನ

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

 

ರೈಲು ಹರಿದು ಅಪರಿಚಿತ ವ್ಯಕ್ತಿ ಸಾವು

ಅ.25ರಂದು ಭದ್ರಾವತಿ ರೈಲು ನಿಲ್ದಾಣದಿಂದ ಹೊರಟ ರೈಲುಗಾಡಿ 20651 ಕಿ.ಮೀ ನಂ 59/700-800 ರಲ್ಲಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಮೇಲೆ ಹರಿದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ವಾರಸುದಾರರಿಗೆ ಸಂಬಂಧಿಸಿದಂತೆ ಪ್ರಕಟಣೆ ನೀಡಲಾಗಿದೆ. 

 

ಗುರುತು ಪರಿಚಯ 

ಮೃತನು ಸುಮಾರು 4 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ 2 ಇಂಚು ಕಪ್ಪು ಕೂದಲು, ಅರ್ಧ ಇಂಚು ಕಪ್ಪು ಮೀಸೆ ಇರುತ್ತದೆ. ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಅದರ ಮೇಲೆ ಪ್ಲಸ್ ಆಕಾರದ ನೀಲಿ ಕಲರ್‍ನ ಗೆರೆ ಇರುತ್ತದೆ. ಬಿಳಿ ಬಣ್ಣದ ಕ್ರಾಸ್ ಬನಿಯನ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.



ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

 

ಅಪರಿಚಿತ ಯುವಕನ ಶವ ಪತ್ತೆ 

 ಅ.25 ರಂದು ಶಿವಪುರ-ಬೀರೂರು ರೈಲು ನಿಲ್ದಾಣದ ಮಧ್ಯೆ ಕಿ.ಮೀ 02-900-03/000 ರಲ್ಲಿ ಸುಮಾರು 22 ವರ್ಷ ವಯಸ್ಸಿನ ಅಪರಿಚಿತ ಯುವಕನು ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೀರೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

 

ಮೃತನು ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು, ಸುಮಾರು 1 ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಆಕಾಶ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.

 

 

ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ. 


 

ಇನ್ನಷ್ಟು ಸುದ್ದಿಗಳು 

 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

 

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

 

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!