ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕರ ಹೆಸರು | ಏರ್‌ಪೋರ್ಟ್‌ಗೆ ಕುವೆಂಪು ಹೆಸರು |ಸಂಪುಟ ಸಭೆಯಲ್ಲಿ ಅಸ್ತು!

Shimoga railway station to be named after Keladi Shivappa Nayaka | Airport to be named after Kuvempu |Cabinet meeting approved!

ಶಿವಮೊಗ್ಗ  ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕರ ಹೆಸರು |   ಏರ್‌ಪೋರ್ಟ್‌ಗೆ ಕುವೆಂಪು ಹೆಸರು |ಸಂಪುಟ ಸಭೆಯಲ್ಲಿ ಅಸ್ತು!
ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕರ ಹೆಸರು | ಏರ್‌ಪೋರ್ಟ್‌ಗೆ ಕುವೆಂಪು ಹೆಸರು |ಸಂಪುಟ ಸಭೆಯಲ್ಲಿ ಅಸ್ತು!

MALENADUTODAY.COM | SHIVAMOGGA  | #KANNADANEWSWEB

ಶಿವಮೊಗ್ಗದ ಸೋಗಾನೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಇಡಬೇಕು ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರೇ ಖುದ್ದು ಸುದ್ದಿಗೋಷ್ಟಿ ನಡೆಸಿ ಹೇಳಿದ್ದರು. ಅಲ್ಲದೆ ಈ ಸಂಬಂಧ ಖುದ್ದಾಗಿ ಪ್ರಸ್ತಾವನೆ ಸಲ್ಲಿಸಿ ಕೇಂದ್ರಕ್ಕೆ ಕಳಿಸಿಕೊಂಡುವ ವ್ಯವಸ್ಥೆಯನ್ನು ರಾಜ್ಯಸರ್ಕಾರದ ಮೂಲಕ ಮಾಡಿಸುತ್ತೇನೆ ಎಂದು ತಿಳಿಸಿದ್ದರು. 

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಮತ್ತೊಂದು OTP ವಂಚನೆ! ₹3.48 ಲಕ್ಷ ಮಂಗಮಾಯ! ನಡೆದಿದ್ದೇನು?

ಸದ್ಯ ಬಿಎಸ್​ವೈರ ಅಣತಿಯಂತೆ  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಸೋಮವಾರ ಒಪ್ಪಿಗೆ ನೀಡಿದೆ  ಇದೇ ತಿಂಗಳು 27ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. 

ಈ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಅಂತಿಮವಾಗಿ ರಾಷ್ಟ್ರಕವಿ ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ. ಇದೇ ವೇಳೇ  ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ (keladi shivappa nayaka) ಹೆಸರು ಇರಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂಬ ಮಾಹಿತಿಯಿದೆ. 

BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com