KARNATAKA NEWS/ ONLINE / Malenadu today/ Jul 6, 2023 SHIVAMOGGA NEWS
ಶಿವಮೊಗ್ಗದಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕುಗಳಲ್ಲಿ ಮಳೆ ಕಳೆಗಟ್ಟಿದೆ. ಇನ್ನೂ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 254.80 ಮಿಮಿ ಮಳೆಯಾಗಿದ್ದೆ. ಸರಾಸರಿ 36.40 ಮಿಮಿ ಮಳೆ ದಾಖಲಾಗಿದೆ.
ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 109.53 ಮಿಮಿ ಮಳೆ ದಾಖಲಾಗಿದೆ.
ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಮಳೆಯಾಗಿದೆ
ಶಿವಮೊಗ್ಗ 11.80 ಮಿಮಿ., ಭದ್ರಾವತಿ 10.10 ಮಿಮಿ., ತೀರ್ಥಹಳ್ಳಿ 50.40 ಮಿಮಿ., ಸಾಗರ 80.80 ಮಿಮಿ., ಶಿಕಾರಿಪುರ 18.90 ಮಿಮಿ., ಸೊರಬ 28.20 ಮಿಮಿ. ಹಾಗೂ ಹೊಸನಗರ 54.60 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ: 1819 (ಗರಿಷ್ಠ), 1744.40 (ಇಂದಿನ ಮಟ್ಟ), 15466.00 (ಒಳಹರಿವು), 1698.0 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1765.30.
ಭದ್ರಾ: 186 (ಗರಿಷ್ಠ), 138.00 (ಇಂದಿನ ಮಟ್ಟ), 6479.00 (ಒಳಹರಿವು), 160.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 160.11.
ತುಂಗಾ: 588.24 (ಗರಿಷ್ಠ), 587.54 (ಇಂದಿನ ಮಟ್ಟ), 12082.00 (ಒಳಹರಿವು), 7545.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 571.48 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3670 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 574.18 (ಎಂಎಸ್‍ಎಲ್‍ಗಳಲ್ಲಿ).
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1008 (ಒಳಹರಿವು), 234.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.60 (ಎಂಎಸ್‍ಎಲ್‍ಗಳಲ್ಲಿ)..
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 565.86 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2313.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 573.52 (ಎಂಎಸ್‍ಎಲ್‍ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 573.28 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1143.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 577.76 (ಎಂಎಸ್‍ಎಲ್‍ಗಳಲ್ಲಿ).
ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ನೇರ ಸಂದರ್ಶನ
ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕೆಳಕಂಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜು.13 ರ ಬೆಳಗ್ಗೆ 11 ಗಂಟೆಗೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ,
ಜಾನುವಾರು ಸಾಗಾಣಿಕೆ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿ ಶಾಸ್ತ್ರ), ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರ ವಿಭಾಗದಲ್ಲಿ (ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ/ಪರೋಪಜೀವಿ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಲತಾಣ ವಿಳಾಸ www.kvafsu.edu.in ನ್ನು ಮತ್ತು ದೂರವಾಣಿ ಸಂಖ್ಯೆ : 08182-200872 ನ್ನು ಸಂಪರ್ಕಿಸುವಂತೆ ಡೀನ್ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
