SHIVAMOGGA NEWS TODAY

ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ, ಚಾಲಕ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿಯನ್ನು ಅಣ್ಣಾನಗರದ ನಿವಾಸಿ ಆಲ್ತಾಪ್​ ಪಾಷಾ 30 ಎಂದು ಗುರುತಿಸಲಾಗಿದೆ.

Shimoga Road Accident Auto Driver died
Shimoga Road Accident Auto Driver died

ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ

ಕಳೆದ ರಾತ್ರಿ ಆಲ್ತಾಪ್​ ಪಾಷಾ ಆಟೋದಲ್ಲಿ ಗೋಪಿ ವೃತ್ತದಿಂದ 4 ಮಂದಿ ಪ್ರಯಾಣಿಕರನ್ನು  ರೈಲ್ವೇ ನಿಲ್ದಾಣಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಾವೇರಿಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಸ್ವಿಫ್ಟ್​ ಡಿಸೈರ್​ ಕಾರೊಂದು ಮಹಾವೀರ ವೃತ್ತದ ಬಳಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಆಟೋ ಮುಂಬಾಗ ಸಂಪೂರ್ಣ ಜಖಂ ಆಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾರೆ. ಇನ್ನುಳಿದಂತೆ ಆಟೋದಲ್ಲಿದ್ದ 4 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಬಂಧ ಶಿವಮೊಗ್ಗದ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Road Accident Auto Driver died
Shimoga Road Accident Auto Driver died

Shimoga Road Accident Auto Driver died

 

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.