ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

Malenadu Today

KARNATAKA NEWS/ ONLINE / Malenadu today/ May 23, 2023 SHIVAMOGGA NEWS

ಶಿವಮೊಗ್ಗ/ ಉತ್ತರ ಕರ್ನಾಟಕ ಜಿಲ್ಲೆಗಳನ್ನು ಸಂಪರ್ಕಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ಕಾಮಗಾರಿಯ ಮೊದಲ ಹಂತವನ್ನು ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ. 

ಈ ಸಂಬಂಧ  ನಿನ್ನೆ ಅಂದರೆ, ದಿನಾಂಕ:22.05.2023 ರಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾ ಪ್ರಬಂಧಕ  ಸಂಜೀವ್ ಕಿಶೋರ್   ರೈಲ್ವೆ ಅಧಿಕಾರಿಗಳಾದ ಹೆಚ್.ಎಂ. ದಿನೇಶ್, CPTM,  ಶ್ರೀಧರ್ ಮೂರ್ತಿ, IDD, GoK,  ಸಂತೋಷ್ ಹೆಗಡೆ, ಸೆಕ್ರೆಟರಿ,   ಆಶೀಷ್ ಪಾಂಡೆ, GM, ನೈರುತ್ಯ ರೈಲ್ವೆ, ಹುಬ್ಬಳ್ಳಿ ಹಾಗೂ  ಆನಂದ ಭಾರತಿ, CE, SWR  ಒಳಗೊಂಡ ಅಧಿಕಾರಿಗಳ ಜೊತೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. 

ಈ ವೇಳೆ ಡಿಸೆಂಬರ್ 2025ರ ವೇಳೆಗೆ ಶಿವಮೊಗ್ಗ-ಶಿಕಾರಿಪುರ ನಡುವಿನ ಕಾಮಗಾರಿಯು ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು  ತಳಿಸಿದ್ಧಾರೆ. ಅಲ್ಲದೆ ಸಭೆಯಲ್ಲಿ  ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಗಿದೆ. .

2. 2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಮಲೆನಾಡಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಸೇತುವೆಯಾಗುವ ರೂ.1,200 ಕೋಟಿಗಳ ಅಂದಾಜು ವೆಚ್ಚದಲ್ಲಿ ಮಂಜೂರಾಗಿರುವ ಶಿವಮೊಗ್ಗ-ಶಿಕಾರಿಪುರ- ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ಯೋಜನೆ ಮಂಜೂರಾಗಿತ್ತು. 

ಯೋಜನೆಯ ಮೊದಲನೇ ಹಂತವಾದ ಶಿವಮೊಗ್ಗ-ಶಿಕಾರಿಪುರ (46 ಕಿ.ಮೀ) ನಡುವಿನ ಕಾಮಗಾರಿಗೆ ಅಗತ್ಯವಿರುವ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆದಾರರನ್ನು ಸಹ ನಿಗಧಿಪಡಿಸಲಾಗಿದೆ. ದಿನಾಂಕ: 27.02.2023 ರಂದು  ನರೇಂದ್ರ ಮೋದಿಯರವರು ಯೋಜನೆಗೆ ಶಿಲಾನ್ಯಾಸ ಕೈಗೊಂಡಿದ್ದರು.  ಈ ಯೋಜನೆಯ ಕಾಮಗಾರಿಯ ಪೂರ್ವಭಾವಿ ಸಿದ್ದತೆಗಳು ಆರಂಭ ಗೊಂಡಿದ್ದು ಮುಂದಿನವಾರದಿಂದ ಕಾಮಗಾರಿಯನ್ನು ಪ್ರಾರಂಭವಾಗಲಿದೆ.  

 

 

Share This Article