ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ ವೈದ್ಯಕೀಯ ಹಾಸ್ಟೆಲ್‌ನಲ್ಲಿ ಬುಧವಾರ ಸಂಜೆ ತರಬೇತಿ ನಿರತ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. 

ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್​ ಓಡಾಟ! ವೇಳಾಪಟ್ಟಿ ಇಲ್ಲಿದೆ

Shimoga SIMS Hostel  ಇವರು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (SIMS) ರೇಡಿಯಾಲಜಿ ವಿಭಾಗದಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ (PG) ಪದವಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಸಂಜೆ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಸಂದೀಪ್ ರಾಜ್ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸಾವಿಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂದೀಪ್ ಕಳೆದ ಕೆಲವು ಸಮಯದಿಂದ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga SIMS Hostel Trainee Doctor suicide