ಶಿವಮೊಗ್ಗ: ಸ್ವಂತ ಮಗ, ಸ್ನೇಹಿತರಿಂದಲೇ ಮನೆಯಲ್ಲಿ ಕಳ್ಳತನ? ಪೊಲೀಸರಿಗೆ ದೂರು ನೀಡಿದ ತಂದೆ!

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Shimoga Theft Case ಶಿವಮೊಗ್ಗ: ನಗರದ ಪೊಲೀಸ್​​ ಠಾಣಾ ವ್ಯಾಪ್ತಿಯೊಂದರ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಸ್ವಂತ ಮಗ ಹಾಗೂ ಆತನ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆ ಎಂದು ತಂದೆಯೇ ಪೊಲೀಸರಿಗೆ ದೂರು ನೀಡಿರುವ ಅಪರೂಪದ ಘಟನೆಯೊಂದು ಸಂಭವಿಸಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ನಗರದ ಪೊಲೀಸ್​​ ಠಾಣಾ ವ್ಯಾಪ್ತಿಯೊಂದರ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ತಕ್ಷಣ, ಮನೆಯ ಮಾಲೀಕರು ತಕ್ಷಣವೇ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಳ್ಳತನ ನಡೆದ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರು, ನಿಮಗೆ ಯಾರ ಮೇಲಾದರೂ ಅನುಮಾನವಿದೆಯೇ ಎಂದು ಮನೆಯ ಮಾಲೀಕರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಮಾಲೀಕರು, ಈ ಕಳ್ಳತನವನ್ನು ನನ್ನ ಸ್ವಂತ ಮಗ ಹಾಗೂ ಆತನ ಸ್ನೇಹಿತರೇ ಸೇರಿ  ನಡೆಸಿರಬಹುದು ಅನುಮಾನ ವ್ಯಕ್ತಪಡಿಸಿದ್ದಾರೆ.

ತಂದೆಯ ದೂರನ್ನು ಆಲಿಸಿದ 112 ಸಿಬ್ಬಂದಿಯು, ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ​ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor