ಶಿವಮೊಗ್ಗ | ಮೂರು ದಿನ ಭರ್ಜರಿ ಮಳೆ | ಭಾರತೀಯ ಹವಾಮಾನ ಇಲಾಖೆಯ ಪ್ರಕಟಣೆ | ವಿವರ ಇಲ್ಲಿದೆ

Shimoga | Three days of heavy rain | India Meteorological Department (IMD) Notification | Here's the details

ಶಿವಮೊಗ್ಗ  | ಮೂರು ದಿನ ಭರ್ಜರಿ ಮಳೆ | ಭಾರತೀಯ ಹವಾಮಾನ ಇಲಾಖೆಯ ಪ್ರಕಟಣೆ |  ವಿವರ ಇಲ್ಲಿದೆ
India Meteorological Department

Shivamogga  Apr 16, 2024  ಹವಾಮಾನ ಇಲಾಖೆ ಬೆಂಗಳೂರು ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಈ ವಾರದ ಮಳೆಯ ಮನ್ಸೂಚನೆಯನ್ನ ನೀಡಿದೆ.  ನಾಳೆ ಒಣಹವೆ ಮುಂದುವರಿಯಲಿದ್ದು ಏಪ್ರಿಲ್‌ 18,19,20 ರಂದು ಶಿವಮೊಗ್ಗವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ತನ್ನ ಡೈಲಿ ಬುಲೆಟಿನ್‌ನಲ್ಲಿ ಹವಾಮಾನ ಇಲಾಖೆಯು ಈ ರೀತಿ ಮಾಹಿತಿ ನೀಡಿದೆ. 

India Meteorological Department, Bangalore

17ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

18ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದಿದೆ. 

19ನೇ ಏಪ್ರಿಲ್ 2024 : ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಅಂತಾ ಹೇಳಿದೆ 

20ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ತಿಳಿಸಿದೆ. 

ಇನ್ನೂ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ಮುಂದಿನ ಏಳು ದಿನಗಳ ಮಳೆ ಮನ್ಸೂಚನೆಯ ಪಟ್ಟಿಯಲ್ಲಿ ಶಿವಮೊಗ್ಗದಲ್ಲಿ 18 ರಿಂದ ಮೂರು ದಿನ ಹಸಿರು ಬಣ್ಣವನ್ನ ತೋರಿಸಲಾಗಿದೆ. ಅಂದರೆ ಈ ಮೂರು ದಿನ ಶಿವಮೊಗ್ಗದ ಕೆಲವೆಡೆ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ. ಇನ್ನೂ ಗುಡುಗು ಮಿಂಚು ಬಿರುಗಾಳಿಯು ಸಹ ಆಯ್ದ ಸ್ಥಳಗಳಲ್ಲಿ ಬೀಸುವ ಮುನ್ಸೂಚನೆ ನೀಡಲಾಗಿದೆ. 

ಇನ್ನೂ ವಾಡಿಕೆ ಮಳೆ ಸಹ ಈ ಸಲ ಹೆಚ್ಚಿರಲಿದ್ದು ಆ ಬಗ್ಗೆ ಇಲ್ಲಿದೆ ವರದಿ ಸಿಹಿಸುದ್ದಿ  ನೀಡಿದ ಭಾರತೀಯ ಹವಾಮಾನ ಇಲಾಖೆ  | ಈ ವರ್ಷದ ಮಳೆ ಭವಿಷ್ಯ ಹೇಗಿದೆ ಗೊತ್ತಾ  | ರೈತರಿಗೆ ಲಾಟರಿ!