ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 26 2025 : ಶಿವಮೊಗ್ಗ ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ ಚಟ್ ಪಟ್ ನ್ಯೂಸ್ ನಿಮ್ಮ ಮುಂದೆ.
ಭದ್ರಾವತಿಯಲ್ಲಿ ಮಾರಕಾಸ್ತ್ರ ಪ್ರದರ್ಶನ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು, ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಬಸ್ ಸ್ಟಾಪ್ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪಬ್ಲಿಕ್ನಲ್ಲಿ ಶೋಆಫ್ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯರು ದೂರಿದ ಬೆನ್ನಲ್ಲೆ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯೂಟೌನ್ ಪೊಲೀಸ್ ಠಾಣೆಗೆ ಕರೆದೊಯ್ದು ಕೇಸ್ ದಾಖಲಿಸಿದ್ದಾರೆ.
ಬೈಕ್ ಆಕ್ಸಿಡೆಂಟ್, ಪರಸ್ಪರ ಗಲಾಟೆ
ಇತ್ತ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದೆ. ಕಳೆದ 24 ರಂದು ನಡೆದ ಘಟನೆಯಲ್ಲಿ ಅಪಘಾತದ ವಿಚಾರಕ್ಕೆ ಎರಡು ಕಡೆಯವರು ಗಲಾಟೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ನಿಲ್ಲಿಸಿ ಕಂಪ್ಲೆಂಟ್ ನೀಡುವಂತೆ ಸೂಚಿಸಿ, ಎರಡು ಕಡೆಯವರನ್ನ ಸ್ಥಳದಿಂದ ತೆರಳುವಂತೆ ಮಾಡಿದರು.
ಮನೆ ಬೀಗ ಮುರಿದು ಕಳ್ಳತನ
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆದಿದೆ. ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿವಾಸಿಯೊಬ್ಬರ ಮನೆಯ ಬೀಗವನ್ನು ಮುರಿದು ದುಷ್ಕರ್ಮಿಗಳು ಕಳ್ಳತನವೆಸಗಿದ್ದಾರೆ. ಮನೆಯಲ್ಲಿದ್ದ ಟಿವಿ ಕಳ್ಳತನವಾಗಿರುವುಗು ಗೊತ್ತಾಗಿದ್ದು, ಈ ಸಂಬಂಧ ಪೊಲೀಸರು ಇನ್ನಷ್ಟು ವಿಚಾರಣೆ ನಡೆಸ್ತಿದ್ದಾರೆ.
ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shimoga Todays Chat Pat News