SHIVAMOGGA NEWS TODAY

ಶಿವಮೊಗ್ಗ: ಟ್ರಾಫಿಕ್ ಫೈನ್ ಕಟ್ಟುವವರಿಗೆ ಬಂಪರ್ ಆಫರ್; ಶೇ. 50 ರಷ್ಟು ದಂಡ ರಿಯಾಯಿತಿ ಪ್ರಕಟ! ಎಷ್ಟು ದಿನ ಇರುತ್ತೆ ಈ ಆಫರ್​​

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga Traffic Fine ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ  ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಈ ರಿಯಾಯಿತಿಯು ನಿರ್ದಿಷ್ಟ ಅವಧಿಯ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ. 1991 ರಿಂದ 2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ.

ಶಿವಮೊಗ್ಗ ಜಿಲ್ಲೆಯ ಬಾಕಿ ಪ್ರಕರಣಗಳು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ. 

ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.

Shimoga Traffic Fine Get 50% Off

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.