INFORMATION NEWS

ಶಿವಮೊಗ್ಗ ವಾಟರ್ ಸಪ್ಲೈ ಅಪ್ಡೇಟ್: ಎರಡು ದಿನ ಕುಡಿಯುವ ನೀರು ಬರುವುದಿಲ್ಲ! ಕಾರಣವಿದೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga | ಶಿವಮೊಗ್ಗ ನಾಗರಿಕರ ಗಮನಕ್ಕೆ! ಎರಡು ದಿನಗಳ ಕಾಲ ಕುಡಿಯುವ ನೀರು ಪೂರೈಕೆಯಲ್ಲಿ ವತ್ಯಯವಾಗುವ ವಿಷಯದ ಬಗ್ಗೆ ಇಲ್ಲೊಂದು ಸುದ್ದಿ ಬಂದಿದೆ. ನಗರದ ವಿದ್ಯಾನಗರ ಮಧ್ಯಂತರ ಉನ್ನತ ಮಟ್ಟದ ಜಲಾಗಾರಕ್ಕೆ ನೀರು ಸರಬರಾಜು ಮಾಡುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಶಿವಮೊಗ್ಗ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. 

Shimoga Water Supply Disruption on Feb 7 and 8 Due to Maintenance
Shimoga Water Supply Disruption on Feb 7 and 8 Due to Maintenance

ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ

ಪ್ರಕಟಣೆಯಲ್ಲಿ ಮೆಸ್ಕಾಂ ಇಲಾಖೆಯ ವತಿಯಿಂದ ವಿದ್ಯಾನಗರದ ಮಧ್ಯಂತರ ನೀರು ಸರಬರಾಜು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ತಿ ಮತ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ, ಈ ದುರಸ್ತಿ ಕಾರ್ಯವು ದಿನಾಂಕ 7-2-2026 ರಂದು ನಡೆಯಲಿದ್ದು, ಈ ಸಮಯದಲ್ಲಿ ಪಂಪಿಂಗ್ ಸ್ಟೇಷನ್‌ಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಪರಿಣಾಮವಾಗಿ ದಿನಾಂಕ 7-2-2026 ಹಾಗೂ 8-2-2026 ರಂದು ಶಿವಮೊಗ್ಗ ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ತಾಂತ್ರಿಕ ಸಮಸ್ಯೆಯನ್ನು ಅರ್ಥಮಾಡಿಕೊಂಡು, ನೀರಿನ ಬಳಕೆಯಲ್ಲಿ ಮಿತವ್ಯಯ ಪಾಲಿಸುವ ಮೂಲಕ ಮಂಡಳಿಯೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Shimoga Water Supply Disruption on Feb 7 and 8 Due to Maintenance
Shimoga Water Supply Disruption on Feb 7 and 8 Due to Maintenance

ಉದ್ಯೋಗವಕಾಶ! ಶಿವಮೊಗ್ಗದಲ್ಲಿ ನೇರ ಸಂದರ್ಶನ! ಪೂರ್ತಿ ವಿವರ ಇಲ್ಲಿದೆ ಓದಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Shimoga Water Supply Disruption on Feb 7 and 8 Due to Maintenance ಶಿವಮೊಗ್ಗ ವಾಟರ್ ಸಪ್ಲೈ ಅಪ್ಡೇಟ್: ಎರಡು ದಿನ ಕುಡಿಯುವ ನೀರು ಬರುವುದಿಲ್ಲ! ಕಾರಣವಿದೆ
Shimoga Water Supply Disruption on Feb 7 and 8 Due to Maintenance
Shimoga Water Supply Disruption on Feb 7 and 8 Due to Maintenance

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ