shimoga water supply / ಶಿವಮೊಗ್ಗದಲ್ಲಿ ಎರಡು ದಿನ ನೀರು ಬರಲ್ಲ

Malenadu Today

shimoga water supply ಶಿವಮೊಗ್ಗ : ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ನಾಳೆ ಅಂದರೆ ಮೇ 7 ಹಾಗೂ 8 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ಶಿವಮೊಗ್ಗದ  ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ವಿಭಾಗ ತಿಳಿಸಿದೆ.  ನೀರು ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಮಿಥುನ್ ಕುಮಾರ್ ಪ್ರಕಟಣೆಯನ್ನು ನೀಡಿದ್ದಾರೆ. ಅವರು ನೀಡಿರುವ ಪ್ರಕಟಣೆಯ ವಿವರ ಹೀಗಿದೆ.  ಇವತ್ತು ಮಂಗಳವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ , ಜಲಮಂಡಳಿಯು, ಗಾಜನೂರು ಜಲಾಶಯದಿಂದ ನೀರು ಪೂರೈಕೆಯಾಗುವ ಮೂಲ ಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ತಿ ಮತ್ತು ನಿರ್ವಹಣೆ ಸಂಬಂಧ, ಮೆಸ್ಕಾಂ ಮೇ 7 ರಂದು ಮೆಸ್ಕಾಂ ವಿದ್ಯುತ್ ನಿಲುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ ಮೇ 7 ಹಾಗೂ 8 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಗರೀಕರು ಸಹಕರಿಸುವಂತೆ ಮನವಿ ಮಾಡಲಾಗಿದೆ. 

shimoga water supply

- Advertisement -
Share This Article
Leave a Comment

Leave a Reply

Your email address will not be published. Required fields are marked *