ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ವಜಾಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ, ಕಾರಣವೇನು

ಶಿವಮೊಗ್ಗ: ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ನಗರ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು

ಪ್ರತಿಭಟನೆಯನ್ನು ದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಎಪ್ಸ್ಟೀನ್ ಫೈಲ್ಸ್‌ನಲ್ಲಿ ಬಹಿರಂಗವಾಗಿರುವ ಅಂಶಗಳು ದೇಶಕ್ಕೆ ಅವಮಾನಕಾರಿಯಾಗಿವೆ. ವಿದೇಶಿ ನಾಯಕರ ಮುಂದೆ ನೃತ್ಯ ಮಾಡುವ ಮೂಲಕ ಪ್ರಧಾನಿಯವರು ದೇಶದ ಮರ್ಯಾದೆಯನ್ನು ಹರಾಜು ಹಾಕಿದ್ದಾರೆ. ಇಂತಹ ಕಾಂಪ್ರಮೈಸ್ ಪ್ರಧಾನಿಯನ್ನು ರಾಷ್ಟ್ರಪತಿಗಳು ಕೂಡಲೇ ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿದರು. 

ಇದೇ ವೇಳೆ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ಹೆಗಡೆ ಹಾಗೂ ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ ಅವರು ಮಾತನಾಡಿ, ಸರ್ಕಾರವು ಚೀನಾ ಮತ್ತು ದಕ್ಷಿಣ ಕೊರಿಯಾದ ಆವಿಷ್ಕಾರಗಳನ್ನು ‘ಮೇಕ್ ಇನ್ ಇಂಡಿಯಾ’ ಅಡಿಯಲ್ಲಿ ಸ್ವದೇಶಿ ಉತ್ಪನ್ನಗಳೆಂದು ಸುಳ್ಳು ಹೇಳುತ್ತಿದೆ. ಕೊರೊನಾ ಸಂದರ್ಭದಲ್ಲೂ ವೈಜ್ಞಾನಿಕ ಆಧಾರವಿಲ್ಲದ ಸುದ್ದಿಗಳನ್ನು ಹರಡಿ ದೇಶವನ್ನು ನಗೆಪಾಟಲಿಗೆ ಗುರಿಪಡಿಸಲಾಗಿತ್ತು ಎಂದು ಗಲ್ಗೋಟಿಯಾ ವಿವಿ ಹಾಗೂ ಪ್ರಧಾನಿ ನಡುವಿನ ನಂಟನ್ನು ಪ್ರಶ್ನಿಸಿದರು.    

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮಧುಸೂದನ್, ಚರಣ್ ಜಿ ಶೆಟ್ಟಿ, ಗಿರೀಶ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Shimoga Youth Congress Protest 

Shimoga Youth Congress Protest 
Shimoga Youth Congress Protest 
shivamogga car decor sun control house
shivamogga car decor sun control house