ಶಿವಮೊಗ್ಗ- ತೀರ್ಥಹಳ್ಳಿ ವಿದ್ಯಾರ್ಥಿಗಳಿಗೆ ಸಿಕ್ಕಿತು ರಾಜ್ಯಮಟ್ಟದ ಪ್ರಶಸ್ತಿ

Shimoga-Thirthahalli students get state-level award

ಶಿವಮೊಗ್ಗ- ತೀರ್ಥಹಳ್ಳಿ ವಿದ್ಯಾರ್ಥಿಗಳಿಗೆ ಸಿಕ್ಕಿತು ರಾಜ್ಯಮಟ್ಟದ ಪ್ರಶಸ್ತಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ದಿನಾಂಕ: 30-12-2022 ಮತ್ತು 17-01-2023 ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಸರ್ಕಾರಕ್ಕೆ ಇನ್ನೊಂದು ಸಮಸ್ಯೆಯಾಗಲ್ಲ: ಕೆ.ಎಸ್​.ಈಶ್ವರಪ್ಪ

ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಹಾಗೂ ಅಭಿಜ್ಞ ಓ.ಎ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಗ್ಗೆ ಕೊನೆಯ ಅಭಿಪ್ರಾಯ ತಿಳಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಇವರು ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com