ಶಿಮುಲ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇನ್ನೆರಡೇ ದಿನ  ಬಾಕಿ 

prathapa thirthahalli
Prathapa thirthahalli - content producer

ಶಿವಮೊಗ್ಗ : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 194 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ಗ್ರೂಪ್ ಎ, ಬಿ, ಸಿ ವಿಭಾಗದಲ್ಲಿ ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ಕೆಮಿಸ್ಟ್, ಅಕೌಂಟೆಂಟ್ ಹಾಗೂ ಕಿರಿಯ ತಾಂತ್ರಿಕರು ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕುಡುಗೋಲಿನಿಂದ ಹಲ್ಲೆ ಮಾಡಿ ಮಹಿಳೆಯ ಕೊ*ಲೆ, ಆರೋಪಿಗೆ ಜೀವಾವಧಿ ಶಿಕ್ಷೆ

ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 194 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅವುಗಳಲ್ಲಿ ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) – 17, ಸಹಾಯಕ ವ್ಯವಸ್ಥಾಪಕರು (ಆಡಳಿತ) – 1, ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್) – 3, ಎಂಐಎಸ್/ ಸಿಸ್ಟಂ ಆಫೀಸರ್ – 1, ಮಾರುಕಟ್ಟೆ ಅಧಿಕಾರಿ – 2, ತಾಂತ್ರಿಕ ಅಧಿಕಾರಿ – 18, ಕೆಮಿಸ್ಟ್ ದರ್ಜೆ-1 – 21, ಆಡಳಿತ ಸಹಾಯಕ ದರ್ಜೆ – 17, ಲೆಕ್ಕ ಸಹಾಯಕ ದರ್ಜೆ – 12, ಮಾರುಕಟ್ಟೆ ಸಹಾಯಕ ದರ್ಜೆ-2 – 10, ಕೆಮಿಸ್ಟ್ ದರ್ಜೆ-2 – 28, ಕಿರಿಯ ಸಿಸ್ಟಂ ಆಪರೇಟರ್ – 13, ಶೀಘ್ರಲಿಪಿಗಾರರು ದರ್ಜೆ-2 – 1 ಮತ್ತು ಕಿರಿಯ ತಾಂತ್ರಿಕರು – 50 ಹುದ್ದೆಗಳು ಸೇರಿವೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತದ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಬಿಇ, ಎಂಬಿಎ, ಬಿಕಾಂ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಹಿಂದುಳಿದ ವರ್ಗದ (ಪ್ರವರ್ಗ-2ಎ, 2ಬಿ, 3ಎ, 3ಬಿ & ಒಬಿಸಿ) ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

SHIMUL Recruitment  ಅರ್ಜಿ ಶುಲ್ಕದ ವಿವರ

SC/ST/ಪ್ರವರ್ಗ-1 ಹಾಗೂ PWD ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು 1,000 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರಮುಖವಾಗಿ, ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಡಿಸೆಂಬರ್ 14, 2025 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು shimul.coop ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

SHIMUL Recruitment 2025 Apply Online for Jobs

SHIMUL Recruitment 2025 Apply Online for Jobs
SHIMUL Recruitment 2025 Apply Online for Jobs

 

Share This Article