ಶಿಕಾರಿಪುರ : ಅಂಗನವಾಡಿ ಕಾರ್ಯಕರ್ತೆ ಅನುಮಾನಾಸ್ಪದ ಸಾವು

ಶಿರಾಳಕೊಪ್ಪ: ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಶವ ಪತ್ತೆಯಾಗಿದೆ.

ಶಿವಮೊಗ್ಗ : 100 ರೂಪಾಯಿಗೆ ಸಿಗುತ್ತೆ 30 ಕೆಜಿ ಕುರಿ. ಎಲ್ಲಿ ,ಏನಿದು ಸುದ್ದಿ

ಮೃತರನ್ನು ಪ್ರೇಮಾ ಮಡಿವಾಳ (53) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ದೂರಿನ ಮೇರೆಗೆ ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. 

Shiralakoppa ಘಟನೆಯ ಹಿನ್ನೆಲೆ 

ಪ್ರೇಮಾ ಮಡಿವಾಳ ಅವರು ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದು, ಅವರ ಖಾಸಗಿ ಅಂಗದ ಬಳಿ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಇದ್ದಕ್ಕಿದ್ದಂತೆ ಸಂಭವಿಸಿದ ಹೃದಯಾಘಾತವೋ ಅಥವಾ ಯಾವುದಾದರೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಸಂಭವಿಸಿದ ಸಾವೋ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸತ್ಯಾಂಶ ಹೊರಬೀಳಬೇಕಿದೆ. 

ಮೃತ ಪ್ರೇಮಾ ಅವರ ಪತಿ ಎಂಟು ವರ್ಷಗಳ ಹಿಂದೆಯೇ ನಿಧನರಾಗಿದ್ದರು. ಇವರಿಗೆ ನಾಲ್ವರು ಮಕ್ಕಳಿದ್ದು, ಮೂವರು ಹೆಣ್ಣು ಮಕ್ಕಳಿಗೆ ವಿವಾಹವಾಗಿದೆ. ಮಗ ಸಾಗರದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರೇಮಾ ಅವರು ಒಬ್ಬರೇ ವಾಸವಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP)  ನಿಖಿಲ್​ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Shiralakoppa Anganwadi Worker Prema Death

Shiralakoppa Anganwadi Worker Prema Death
shivamogga car decor sun control house
shivamogga car decor sun control house
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು