SHIVAMOGGA | MALENADUTODAY NEWS | Aug 28, 2024 ಮಲೆನಾಡು ಟುಡೆ
ಮಲೆನಾಡು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲಿಯು ಇವತ್ತು ಹವಾಮಾನ ಇಲಾಖೆ ಬೆಂಗಳೂರು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿರುವಂತೆ ಶಿವಮೊಗ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಇದರ ಪ್ರಕಾರ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ ಕಾಲ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ & ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ, IMD ಯಿಂದ #ಆರೆಂಜ್ಅಲರ್ಟ್ ನೀಡಲಾಗಿದೆ.
ಆಗಸ್ಟ್ 27 ರಿಂದ ಸೆಪ್ಟೆಂಬರ್ 04 ರವರೆಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಇನ್ನೂ ಇವತ್ತು ಅಂದರೆ ಆಗಸ್ಟ್ 28ರ ಬುಧವಾರದಂದು ಏಳು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇವತ್ತು ಭಾರೀ ಮಳೆಯ ನಿರೀಕ್ಷೆ ಇದೆ.
ಈ ದಿನದ ಮಳೆ ಭವಿಷ್ಯ ಮತ್ತು ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು ಎಚ್ಚರಿಕೆ: pic.twitter.com/rSMxXcdygi
— Karnataka State Natural Disaster Monitoring Centre (@KarnatakaSNDMC) August 27, 2024
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲ
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು