SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
ಯಾರದ್ದೋ ಸೈಟಿಗೆ ಇನ್ಯಾರೋ ದಾಖಲೆ ಸೃಷ್ಟಿಸಿ ಮತ್ಯಾರಿಗೋ ಮಾರುವ ಪ್ರಯತ್ನಗಳಿಗೆ ತಡೆ ಹಾಕುವ ನಿಟ್ಟಿನಲ್ಲಿ ಸರ್ಕಾರ ಆರ್‌ಟಿಸಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಿದೆ. ಈಗಾಗಲೇ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದ ಈ ಪ್ರಕ್ರಿಯೆಯನ್ನ ಇದೀಗ ಎಲ್ಲೆಡೆ ಆರಂಭಿಸಲಾಗುತ್ತಿದೆ.
ಈ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದ್ದು, ಯಾರದ್ದೋ ಆಸ್ತಿಗೆ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಈ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ ಎಂದಿದ್ದಾರೆ.
ಮೃತಪಟ್ಟವರ ಜಮೀನುಗಳನ್ನೂ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ದೂರುಗಳಿವೆ. ಇಂತಹ ಅಕ್ರಮಗಳಿಂದ ವಂಚನೆಗೆ ಒಳಗಾದವರು ಕೋರ್ಟ್, ಕಚೇರಿಗೆ ಅಲೆಯುತ್ತಿದ್ದಾರೆ. ಇದನ್ನ ತಪ್ಪಿಸಲು ಆದಾರ್ ನೋಂದಣಿಯಿಂದ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು