SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
ಕಡಬ ಸಮೀಪ ಶಿವಮೊಗ್ಗ ನಿವಾಸಿ ಸಾವು
ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪ ಖಾಸಗಿ ಬಸ್ ಅನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬುವರ ಪುತ್ರ ದೇವರಾಜ್ (22) ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಧರ್ಮಸ್ಥಳಕ್ಕೆ ಹೋಗಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುವಾಗ ನೂಜಿಬಾಳ್ತಿಲ ಬೆಥನಿ ಕಾಲೇಜಿನ ಬಳಿ ಬಸ್‌ವೊಂದು ಮುಂದಕ್ಕೆ ಹೋಗುತ್ತಿತ್ತು. ಅದನ್ನ ಹಿಂದಿಕ್ಕುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ದೇವರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಸಾವನ್ನಪ್ಪಿದ್ದಾರೆ.
ಗಾಂಜಾ ಎಫೆಕ್ಟ್ ಇಬ್ಬರು ಅರೆಸ್ಟ್
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಅರಳಿಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರ ಪೈಕಿ ಇಬ್ಬರನ್ನ ಗ್ರಾಮಸ್ಥರೇ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಅನ್ವರ್ ಕಾಲೊನಿಯ ಮೊಹಮ್ಮದ್ ಜಬೀ (19) ಮತ್ತು ಅಣ್ಣ ನಗರದ ಸಂಜಯ್ (19) ಬಂಧಿತರು. ಮತ್ತೋರ್ವ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು