ಶಿವಮೊಗ್ಗ: ಗಣೇಶ ಮೂರ್ತಿ ವಿಸರ್ಜನೆ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ, ನಿಗದಿತ ಧ್ವನಿ ಮಿತಿಯನ್ನು ಮೀರಿ ಶಬ್ದ ಮಾಲಿನ್ಯ ಉಂಟು ಮಾಡಿದವರ ವಿರುದ್ಧ ಶಿವಮೊಗ್ಗ ಜಿಲ್ಲಾದ್ಯಂತ ಒಟ್ಟು 55 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವ ರೀತಿಯಲ್ಲಿ ಸೌಂಡ್ ಬಾಕ್ಸ್‌ಗಳು (ಡಿ.ಜೆ.) ಮತ್ತು ಧ್ವನಿವರ್ಧಕಗಳನ್ನು ಬಳಸಿದವರ ವಿರುದ್ಧ ವಿವಿಧ ಕಾನೂನುಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಮುಂದಿನ ದಿನಗಳಲ್ಲಿಯೂ ಸಹ ನಿಯಮಗಳನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯಕ್ಕೆ ಕಾರಣರಾಗುವವರ ವಿರುದ್ಧ ಹೆಚ್ಚು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.