ಮಲೆನಾಡು ಟು ಡೆ ಸುದ್ದಿ/ ತೀರ್ಥಹಳ್ಳಿ : ತೀರ್ಥಹಳ್ಳಿ ಮುಖ್ಯ ರಸ್ತೆಯ ಬಳಿ ಇರುವ ಭೈರವ ಟ್ರಾನ್ಸ್ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ, ಪ್ಲಾಸ್ಟಿಕ್ ಚೀಲ ಹಾಗೂ ನಡುವೆ ಅಡಗಿದ್ದ 7.5 ಅಡಿ ಉದ್ದದ ಬೃಹತ್ ಹೆಬ್ಬಾವೊಂದನ್ನು ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಿಸಿದ್ದಾರೆ.
ನಿನ್ನೆ ಸಂಜೆ 4:30ರ ಸುಮಾರಿಗೆ ಸ್ಥಳದಲ್ಲಿದ್ದ ಸಾರ್ವಜನಿಕರು ಚೀಲಗಳ ನಡುವೆ ಹಾವು ಮಲಗಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಈ ಹಿನ್ನೆಲೆ ತಕ್ಷಣವೇಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿದ ಸ್ನೇಕ್ ಕಿರಣ್ ಅವರು ಸಂಜೆ 5:30 ರಿಂದ 5:45 ರ ಅವಧಿಯಲ್ಲಿ ಸುಮಾರು 10 ಕೆಜಿ ತೂಕ ಮತ್ತು 7.5 ಅಡಿ ಉದ್ದವಿದ್ದ ಬೃಹತ್ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಕಾರ್ಯಾಚರಣೆ ನಡೆಸಿದ್ದಾರೆ.
ಫ್ಯಾಕ್ಟರಿ ಮಾಲೀಕರಿಗೆ ಸೂಕ್ತ ಮಾಹಿತಿ ನೀಡಿದ ಸ್ನೇಕ್ ಕಿರಣ್, ರಕ್ಷಿಸಲಾದ ಹೆಬ್ಬಾವನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.
