ಶಿವಮೊಗ್ಗ: ನಗರದ ಹೊರವಲಯದ ವಿರುಪಿನಕೊಪ್ಪದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಮಗುವನ್ನು ವಿನಯ್ (2) ಎಂದು ಗುರುತಿಸಲಾಗಿದೆ. ಮಗು ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆಯತ್ತ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
- Advertisement -
ಕಾರು ಡಿಕ್ಕಿಯಾದ ರಭಸಕ್ಕೆ ವಿನಯ್‌ನ ತಲೆ, ಕೈ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಮಗುವನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ.ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga accident
TAGGED:Shivamogga accident

