ಕಾರು-ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ

prathapa thirthahalli
Prathapa thirthahalli - content producer

 ಶಿವಮೊಗ್ಗ : ಬೈಕ್​ ಹಾಗೂ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ  ಶಿವಮೊಗ್ಗದ ಅಬ್ಬಲಗೆರೆಯಲ್ಲಿ ನಡೆದಿದೆ

ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಸವಳಂಗ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಅಬ್ಬಲಗೆರೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಬೈಕ್ ಎರಡೂ ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಬೈಕ್ ಸವಾರ, ಶಿವಮೊಗ್ಗದ ಕೊಮ್ಮನಾಳಿನ ಯುವಕ ಚಂದನ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಗೊಂಡಿದ್ದ ಚಂದನ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Shivamogga accident

Shivamogga accident

 

Share This Article