ನೇರ ಗುತ್ತಿಗೆ ಆಧಾರದ ಮೇಲೆ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025:  ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

- Advertisement -

ಅರ್ಜಿ ಸಲ್ಲಿಸುವವರು 45 ವರ್ಷ ಮೀರಿರಬಾರದು. ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಯಲ್ಲಿ 1 ವರ್ಷ ಸೇವಾನುಭವ ಹೊಂದಿರಬೇಕು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕ್ಕೋತ್ತರ ಪದವಿಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪದವಿ/ಸ್ನಾತಕ್ಕೋತ್ತರ ಪದವಿಯ ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ದಾಖಲಾತಿಗಳನ್ನು ಹೊಂದಿರಬೇಕು. 

Shivamogga Agriculture Department invites applications for Assistant Technology Manager (ATM) posts on a contract basis under the ATMA scheme for Ayanoor and Nidige
Shivamogga Agriculture Department invites applications for Assistant Technology Manager (ATM) posts on a contract basis under the ATMA scheme for Ayanoor and Nidige

ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೇವಾ ಅನುಭವ ಪ್ರಮಣ ಪತ್ರ, ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ಪ್ರಮಾಣ ಆದೇಶ ಪತ್ರ, ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧಪಟ್ಟ ಸಂಸ್ಥೆಯಿಂದ ಹಾಜರಾತಿ ಪ್ರಮಾಣ ಪತ್ರ, ಸಂಸ್ಥೆಯಿಂದ ವೇತನ ದೃಢೀಕರಣ ಹಾಗೂ ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳನ್ನು ಲಗತ್ತಿಸಿ ನ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-221906 ನ್ನು ಸಂಪರ್ಕಿಸುವುದು 

Shivamogga Agriculture Department invites applications for Assistant Technology Manager (ATM) posts on a contract basis under the ATMA scheme for Ayanoor and Nidige
Shivamogga Agriculture Department invites applications for Assistant Technology Manager (ATM) posts on a contract basis under the ATMA scheme for Ayanoor and Nidige

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga Agriculture Department invites applications for Assistant Technology Manager (ATM) posts on a contract basis under the ATMA scheme for Ayanoor and Nidige

Share This Article
Leave a Comment

Leave a Reply

Your email address will not be published. Required fields are marked *