Shivamogga Airport : ಶಿವಮೊಗ್ಗ ನಗರದ ಸೋಗಾನೆಯಲ್ಲಿರುವ ವಿಮಾನ ನಿಲ್ಧಾಣ ಕಾಮಗಾರಿ ಪೂರ್ಣವಾಗುತ್ತಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ. ಇದರ ಬೆನ್ನಲ್ಲೆ ದಿನನಿತ್ಯ ನೂರಾರು ಜನರು ಏರ್ಪೋರ್ಟ್ ನೋಡಲು ದಾವಿಸ್ತಿದ್ದಾರೆ. ಅಲ್ಲದೆ ರನ್ವೇನಲ್ಲಿ ವಾಹನ ಚಲಾಯಿಸುತ್ತ ವಿಡಿಯೋಗಳನ್ನು ಶೂಟ್ ಮಾಡುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ?
ಶಿವಮೊಗ್ಗ, ಜ.024: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದ್ದಾರೆ. ನೂತನ ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್‍ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com