STATE NEWS

ಶಿವಮೊಗ್ಗ : ವಿಮಾನಗಳ ಸಲುವಾಗಿ ಸಂಸದರಿಗೆ ಬಿಗ್ ಮನವಿ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸಂಚಾರವನ್ನು  ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ಮುಂದುವರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಆಗ್ರಹಿಸಿದೆ. 

ಇವತ್ತು ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ನೇತೃತ್ವದ ನಿಯೋಗವು ಸಂಸದರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಶಿವಮೊಗ್ಗ ಮತ್ತು ರಾಜಧಾನಿ ಬೆಂಗಳೂರು ನಡುವಿನ ವಿಮಾನಯಾನವು ಮಲೆನಾಡು ಭಾಗದ ಉದ್ಯಮಿಗಳಿಗೆ, ರೋಗಿಗಳಿಗೆ ಹಾಗೂ ಪ್ರವಾಸಿಗರಿಗೆ ವರದಾನವಾಗಿದೆ. ಪ್ರಸ್ತುತ ಪ್ರಯಾಣಿಕರ ಸಂಖ್ಯೆಯೂ ಉತ್ತಮವಾಗಿದ್ದು, ಈ ಮಾರ್ಗವು ಆರ್ಥಿಕವಾಗಿ ಲಾಭದಾಯಕವಾಗಿ ನಡೆಯುತ್ತಿದೆ, ಎಂದು ಸಂಘದ ಮುಖಂಡರು ವಿವರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಎ.ಎಂ. ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್. ಸುಕುಮಾರ್, ಖಜಾಂಚಿ ಆರ್. ಮನೋಹರ ಸೇರಿದಂತೆ ಪ್ರಮುಖ ನಿರ್ದೇಶಕರಾದ ಗಣೇಶ್ ಎಂ. ಅಂಗಡಿ, ಕೆ.ಬಿ. ಶಿವಕುಮಾ‌ರ್, ಉದಯಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕುಮಾರ್ ಮತ್ತು ಪ್ರದೀಪ್ ವಿ. ಎಲಿ ಉಪಸ್ಥಿತರಿದ್ದರು. ಸಂಸದರು ಈ ವಿಷಯವಾಗಿ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

Shivamogga-Bangalore Flight Continuity Appeals MP

Shivamogga-Bangalore Flight Continuity Appeals MP
Shivamogga-Bangalore Flight Continuity Appeals MP
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.