KARNATAKA NEWS/ ONLINE / Malenadu today/ Aug 29, 2023 SHIVAMOGGA NEWS
ಹಬ್ಬಗಳು ಹತ್ತಿರವಾಗುತ್ತಿರುವಂತಯೇ ಶಿವಮೊಗ್ಗ ಪೊಲೀಸರು ಮತ್ತಷ್ಟು ಅಲರ್ಟ್ ಆಗುತ್ತಿದ್ದು, ರಾತ್ರಿ ವೇಳೆ ಜನರಿಗೆ ಉಪದ್ರ ಕೊಡುವ ಮಂದಿಗೆ ಕೇಸ್ ಗಿಫ್ಟ್ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ನಿನ್ನೆ 28-08-2023 ರಂದು ಸಂಜೆ ಪೊಲೀಸರು ಪಬ್ಲಿಕ್ ನ್ಯೂಸೆನ್ಸ್ ಮಾಡುತ್ತಿರುವವರ ವಿರುದ್ಧ 66 ಪಿಟ್ಟಿ ಕೇಸ್ ದಾಖಲಿಸಿದ್ಧಾರೆ.
ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು / ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡವು ಆಯಾ ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ಮಾಡಿದ್ದಾರೆ.
ಈ ವೇಳೆ Public Nuisance ಮಾಡುವ ಮತ್ತು ಅನುಮಾನಸ್ಪಾದ ವ್ಯಕ್ತಿಗಳನ್ನು ಠಾಣೆಗೆ ಕರೆತಂದು, ಅವರುಗಳ ಪೂರ್ವಾಪರಗಳನ್ನು ಪರಿಶೀಲಿಸಿ, Public Nuisance ಮಾಡಿದ ವ್ಯಕ್ತಿಗಳ ವಿರುದ್ದ ಒಟ್ಟು 66 ಲಘು ಪ್ರಕರಣಗಳನ್ನು ಮತ್ತು 2 ಐಎಂವಿ ಕಾಯ್ದೆ ಪ್ರಕರಣಗಳನ್ನು ದಾಖಲಿಸಲಾಗಿದೆ. .
ಇನ್ನಷ್ಟು ಸುದ್ದಿಗಳು
ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್ಐಆರ್!
ಮನೆ ಹಿತ್ತಲಲ್ಲಿದ್ದ ಬಾವಿಗೆ ಬಿದ್ದ ಮಹಿಳೆ! ಬಚಾವ್ ಆಗಿದ್ದೇ ಹೆಚ್ಚು! ನಡೆದಿದ್ದೇನು?
