ಗಣಪತಿ ವಿಸರ್ಜನೆ ಮುಗಿಸಿ ಮರಳುವಾಗ ಡಿವೈಡರ್‌ಗೆ ಆರ್.ಎಕ್ಸ್​ ಬೈಕ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
shivamogga police image
ಪತ್ನಿಯ ಜೊತೆ ಮಾತನಾಡಿದ್ದಕ್ಕೆ ಅಟೆಂಪ್ಟು ಮರ್ಡರ್ ಕೇಸ್ : ಕಾರು ಡಿಕ್ಕಿ ಹೊಡೆಸಿ ಕೊಲೆ ಯತ್ನ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಸವಳಂಗ ರಸ್ತೆಯ ಮೂಲಾ ವೈನ್ಸ್ ಎದುರು ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಗ್ಗೆ ತಡವಾಗಿ ವರದಿಯಾಗಿದೆ. ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ.

ನವುಲೆಯಲ್ಲಿ ಗಣಪತಿ ವಿಸರ್ಜನೆಗೆಂದು ತೆರಳಿದ್ದು ಯುವರಿಬ್ಬರು ಯಮಹಾ ಆರ್.ಎಕ್ಸ್ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಂಡು ಸರ್ಜಿ ಕನ್ವೆನ್ಷನ್ ಹಾಲ್ ಕಡೆಗೆ ಹೋಗುವಾಗ ಮೂಲಾ ವೈನ್ಸ್ ಎದುರು ರಸ್ತೆ ಮಧ್ಯದ ಡಿವೈಡರ್‌ಗೆ ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಯುವಕನ ತಲೆಗೆ, ಎಡ ಹುಬ್ಬಿಗೆ ತೀವ್ರ ಪೆಟ್ಟಾಗಿದ್ದು, ಬಲಗಾಲು ಮುರಿದಿದೆ. ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಅಡಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor