ಶಿವಮೊಗ್ಗ: ಬಿಜೆಪಿಯ ಮುಖಂಡರು ಮನೆಗೆ ಬರ್ತಾರೆ, ವಿಚಾರಿಸಿ ಧನ್ಯವಾದ ಹೇಳಿ ಹೋಗ್ತಾರೆ: ಶಾಸಕ ಎಸ್. ಎನ್. ಚನ್ನಬಸಪ್ಪ

ಹಂಚಿಕೊಳ್ಳಿ
WhatsApp Facebook X Telegram
Shivamogga BJP Launches Door-to-Door Voter Drive
Shivamogga BJP Launches Door-to-Door Voter Drive

Shivamogga BJP ಶಿವಮೊಗ್ಗ : ಜುಲೈ 25 ಮತ್ತು 26 ರಂದು ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಎಸ್.ಐ.ಆರ್ ಕುರಿತು ಮಹಾ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಎಸ್.ಐ.ಆರ್ ಬಗ್ಗೆ ವಿಚಾರಿಸಲಿದ್ದಾರೆ ಎಂದು ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ತಿಳಿಸಿದರು.

ಶಿವಮೊಗ್ಗ ಕೋರ್ಟ್​ನಲ್ಲಿ ಕೆಲಸ! 62 ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ

ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಐ.ಆರ್ ಪ್ರಕ್ರಿಯೆಯ ವೇಳೆ ಪ್ರತಿ ರಾಜಕೀಯ ಪಕ್ಷಕ್ಕೂ ತನ್ನದೇ ಆದ ಜವಾಬ್ದಾರಿಗಳಿರುತ್ತವೆ. ಅದರಂತೆ ಬಿಜೆಪಿ ಪ್ರತಿಯೊಂದು ಮಂಡಲ ಹಾಗೂ ಬೂತ್ ಮಟ್ಟದಲ್ಲಿ ಎಸ್.ಐ.ಆರ್ ಗೆ ಸಂಬಂಧಿಸಿದಂತೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ನಮ್ಮ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಒಟ್ಟು 1,43,800 ಮನೆಗಳನ್ನು ತಲುಪುವ ಸ್ಪಷ್ಟ ಗುರಿಯನ್ನು ಇಟ್ಟುಕೊಂಡಿದ್ದೇವೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯಾದ್ಯಂತ ಒಟ್ಟು 1 ಕೋಟಿ ಮನೆಗಳನ್ನು ತಲುಪುವ ಗುರಿಯನ್ನು ರಾಜ್ಯ ಅಧ್ಯಕ್ಷರು ಹೊಂದಿದ್ದಾರೆ. ಎಸ್.ಐ.ಆರ್ ಪ್ರಕ್ರಿಯೆಗೆ ತನ್ನದೇ ಆದ ಮಹತ್ವದ ಕೊಡುಗೆ ನೀಡಲು ಬಿಜೆಪಿ ಶ್ರಮಿಸುತ್ತಿದೆ. ಮುಂಬರುವ ಆಗಸ್ಟ್ 8 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅರ್ಹ ಮತದಾರರು ಯಾರೂ ಸಹ ಪಟ್ಟಿಯಿಂದ ಬಿಟ್ಟುಹೋಗಬಾರದು ಎಂಬುದು ನಮ್ಮ ಆಶಯ. ಈ ಕಾರಣಕ್ಕಾಗಿಯೇ ಜುಲೈ 25 ಮತ್ತು 26 ರಂದು ವಿಶೇಷ ಅಭಿಯಾನ ಆಯೋಜಿಸಲಾಗಿದೆ. ಇದರಲ್ಲಿ ಶಾಸಕರು, ಪರಿಷತ್ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರವರೆಗೂ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ವಿವರ ನೀಡಿದರು.

ಪ್ರತಿಯೊಬ್ಬ ಪ್ರಮುಖ ಮುಖಂಡ ಮತ್ತು ಕಾರ್ಯಕರ್ತರು ತಲಾ 20 ರಿಂದ 25 ಮನೆಗಳಿಗೆ ಖುದ್ದಾಗಿ ತೆರಳಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 21,608 ನಾಯಕರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸಾರ್ವಜನಿಕರಿಗೆ ಎನ್ಯುಮರೇಷನ್ ಫಾರ್ಮ್ (ಸಮೀಕ್ಷಾ ನಮೂನೆ) ತಲುಪಿದೆಯಾ ಫಾರ್ಮ್ ಸಿಕ್ಕಿದ್ದರೆ ಅದನ್ನು ಭರ್ತಿ ಮಾಡಿ ವಾಪಸ್ ನೀಡಲಾಗಿದೆಯೇ? ಎಂಬಿತ್ಯಾದಿ ಪ್ರಮುಖ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಲಿದ್ದಾರೆ ಎಂದು ಶಾಸಕರು ಸ್ಪಷ್ಟಪಡಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor