ಜಯನಗರ ಪೊಲೀಸ್ ಸ್ಟೆಷನ್ ಎದುರು ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ಪ್ರತಿಭಟನೆ! ಆಕ್ರೋಶಕ್ಕೆ ಕಾರಣವೇನು?

KARNATAKA NEWS/ ONLINE / Malenadu today/ Jul 26, 2023 SHIVAMOGGA NEWS  

ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಇವತ್ತು ಬೆಳಗ್ಗೆ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರನ್ನು  ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿ ಜಯನಗರ ಪೊಲೀಸ್ ಠಾಣೆ ಎದುರು ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪನವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ವತಂತ್ರ ಹೋರಾಟಗಾರರಿಗೆ ಗೌರವ ನೀಡಬೇಕು ಎಂದು ಕೇಳಿದ್ದು ತಪ್ಪೆ, ಎಂದು ಪ್ರಶ್ನಿಸಿದ ಶಾಸಕ ಚನ್ನಬಸಪ್ಪ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ ಆದರೆ ತಪ್ಪೇ ಮಾಡದಿದ್ದಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು.. ಈ ಘಟನೆಯಲ್ಲಿ ಪೊಲೀಸರು ಯುವ ಮೋರ್ಚಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಇದೀಗ ಅವರನ್ನು ಜಯನಗರ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ ಮೇಲಾಗಿ ಅಕ್ರಮವಾಗಿ ಬಂಧನದಲ್ಲಿರಿಸಿರುವ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪನವರು ಜಯನಗರ ಪೊಲೀಸ್ ಠಾಣೆಯರು ಪ್ರತಿಭಟನೆ ಪ್ರತಿಭಟನೆ ನಡೆಸುತ್ತಿದ್ದಾರೆ

ಘಟನೆ ಹಿನ್ನೆಲೆ

ಇವತ್ತು ಬೆಳಗ್ಗೆ ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದ್ರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ, ಸಚಿವರ ವಿರುದ್ಧ ಧಿಕ್ಕಾರ ಕೂಗಿದ್ದರು. 

ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷ ಹರಿಕೃಷ್ಣ, ಮತ್ತು ಕಾರ್ಯಕರ್ತರಾದ ಜಗದೀಶ್, ದರ್ಶನ್, ಪ್ರದೀಪ್ ವಿಶ್ವನಾಥ್ ಮೊದಲಾದವರು ಸಭೆಗೆ ಸಚಿವರು ಬರುತ್ತಿದ್ದಂತೆ ಪ್ರತಿಭಟನೆ ನಡೆಸಿದರು. ವೀರ ಸಾವರ್ಕರ್ ರವರ ಪಠ್ಯವನ್ನು ಶಾಲಾ ಪುಸ್ತಕಗಳಲ್ಲಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಯುವ ಮೋರ್ಚಾ ಈ ಪ್ರತಿಭಟನೆಯನ್ನು ನಡೆಸಿದ್ದರು 

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್​ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್​ ಹೆಲ್ಮೆಟ್​ ಜಪ್ತಿ! ಕಾರಣವೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು? 

Malenadu Today

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​ 

 

Leave a Comment