ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ: ಎಸ್ಪಿ ಕಚೇರಿ ಮುತ್ತಿಗೆಗೆ ಯತ್ನ, ಕಾರಣವೇನು 

prathapa thirthahalli
Prathapa thirthahalli - content producer

shivamogga bjp protest ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಗ್ರರು ಹಾಗೂ ಇತರೆ ಅಪರಾಧಿಗಳಿಗೆ ಐಷಾರಾಮಿ ವ್ಯವಸ್ಥೆಗಳು ಹಾಗೂ “ರಾಜಾತಿಥ್ಯ” ನೀಡುತ್ತಿರುವ ವಿಡಿಯೋ ವೈರಲ್ ಆಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರ್ಣವಾಗಿದೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಇಂದು ಎಸ್‌ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Malenadu Today

shivamogga bjp protest  ರೆಸಾರ್ಟ್‌ ಆದ ಜೈಲು: ಬಿಜೆಪಿ ಆಕ್ರೋಶ

ಶಿವಮೊಗ್ಗದ ಎಸ್‌ಪಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. “ಉಗ್ರರನ್ನ, ರೇಪಿಸ್ಟ್‌ಗಳನ್ನ ಕಾಂಗ್ರೆಸ್ ಸರ್ಕಾರ ಸಾಕುವ ಕೆಲಸ ಮಾಡುತ್ತಿದೆ. ಪರಪ್ಪನ ಅಗ್ರಹಾರ ಜೈಲನ್ನ ರೆಸಾರ್ಟ್ ಮಾಡಿದ್ದಾರೆ” ಎಂದು ಪ್ರತಿಭಟನಕಾರರು ಘೇರಾವ್ ಹಾಕಿದರು. ಉಗ್ರಗಾಮಿಗಳು ಮತ್ತು ದೇಶದ್ರೋಹಿಗಳಿಗೆ ಟಿವಿ, ಮೊಬೈಲ್ ಫೋನ್, ಹಾಗೂ ಗುಂಡು-ತುಂಡುಗಳಂತಹ ಐಷಾರಾಮಿ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಜೈಲು ಒಂದು ರೀತಿ ಸ್ಟಾರ್ ಹೋಟೆಲ್ ಅಥವಾ ಮನರಂಜನಾ ಕ್ಲಬ್ ಆಗಿ ಪರಿವರ್ತನೆಯಾಗಿದೆ ಎಂದು ಯುವ ಮೋರ್ಚಾ ಕಾರ್ಯಕರ್ತರು ಆರೋಪಿಸಿದರು.

ಶಿವಮೊಗ್ಗ-ಬೆಂಗಳೂರು,ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಟ್ರೈನ್ ಸುದ್ದಿ ಓದಿ

 ರಾಜ್ಯಪಾಲರಿಗೆ ಮನವಿ ಮತ್ತು ರಾಜೀನಾಮೆಗೆ ಆಗ್ರಹ

ಪ್ರತಿಭಟನೆಯ ಭಾಗವಾಗಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ, ಜೈಲಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಮಾಫಿಯಾವನ್ನು ರಾಜ್ಯ ಸರ್ಕಾರವು ಕಣ್ಮುಚ್ಚಿ ಕುಳಿತು ನೋಡುತ್ತಿದೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ದೇಶದ್ರೋಹಿಗಳಿಗೆ ಈ ರೀತಿ ಐಷಾರಾಮಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ನೇರ ಆರೋಪ ಮಾಡಲಾಯಿತು. ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರವಷ್ಟೇ ಜೈಲಿನ ಮೇಲೆ ದಾಳಿ ಮಾಡಲಾಗಿದೆ. ರಾಜ್ಯದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರಕ್ಕೆ ಜೈಲಿನ ವ್ಯವಸ್ಥೆ ಮುಳುಗಿ ಹೋಗಿದೆ ಎಂದು ಬಿಜೆಪಿ ಮುಖಂಡರು ದೂರಿದರು.ಈ ಸಂಪೂರ್ಣ ಅಕ್ರಮ ವ್ಯವಸ್ಥೆಗೆ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ನೇರ ಹೊಣೆಗಾರರು ಎಂದು ಬೊಟ್ಟು ಮಾಡಿದ ಜಿಲ್ಲಾ ಬಿಜೆಪಿ ಯುವಮೋರ್ಚಾ, ಕೂಡಲೇ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತು.

shivamogga bjp protest  ಮುತ್ತಿಗೆ ಯತ್ನ, ಕಾರ್ಯಕರ್ತರ ಬಂಧನ

ಈ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಎಸ್ಪಿ ಕಚೇರಿ ಎದುರು ಕುಳಿತು ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುವ ಮುನ್ನವೇ ಪೊಲೀಸರು ಎಚ್ಚೆತ್ತುಕೊಂಡರು. ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಯುವಮೋರ್ಚಾದ ಹಲವು ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಬಿಜೆಪಿ ಮುಖಂಡರು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಸೇರಿದಂತೆ ಹಲವರು ಈ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
Share This Article